ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

7 ನ್ಯಾಯಾಧೀಶರ ವರ್ಗಾವಣೆ

ಬೆಂಗಳೂರು/ನವದೆಹಲಿ: ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಸೇರಿ 7 ನ್ಯಾಯಾಧೀಶರ ವರ್ಗಾವಣೆ ಮಾಡಲಾಗಿದೆ.

ಇನ್ನು ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸಿನ ಮೇರೆಗೆ ಏಳು ಹೈಕೋರ್ಟ್ ನ್ಯಾಯಮೂರ್ತಿಗಳ ವರ್ಗಾವಣೆಗೆ ಕೇಂದ್ರ ಸರ್ಕಾರ ಸೋಮವಾರ ಅಧಿಸೂಚನೆ ಹೊರಡಿಸಿದೆ.

ಕರ್ನಾಟಕ ಹೈಕೋರ್ಟ್ ನ ನ್ಯಾಯಮೂರ್ತಿ ಪಿ ಬಿ ಬಜಂತ್ರಿ ಅವರನ್ನು ಪಾಟ್ನಾ ಹೈಕೋರ್ಟ್ ಗೆ ವರ್ಗಾಯಿಸಲಾಗಿದೆ.

ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ನ ನ್ಯಾಯಮೂರ್ತಿ ರಾಜನ್ ಗುಪ್ತಾ ಹಾಗೂ ರಾಜಸ್ಥಾನ ಹೈಕೋರ್ಟ್ ನ ನ್ಯಾಯಮೂರ್ತಿ ಸಂಜೀವ್ ಪ್ರಕಾಶ್ ಶರ್ಮಾ ಅವರನ್ನು ಪಾಟ್ನಾ ಹೈಕೋರ್ಟ್ ಗೆ ವರ್ಗಾಯಿಸಲಾಗಿದೆ. ಈ ಮೂಲಕ ಇತ್ತೀಚೆಗಿನ ವರ್ಗಾವಣೆ ಪ್ರಕ್ರಿಯೆಯಲ್ಲಿ ಪಟ್ನಾ ನ್ಯಾಯಾಲಯಕ್ಕೆ ಮೂವರು ಹೊಸ ನ್ಯಾಯಮೂರ್ತಿಗಳು ದೊರೆತಂತಾಗಿದೆ.

ಉಳಿದಂತೆ, ನ್ಯಾಯಮೂರ್ತಿ ಟಿ ಎಸ್ ಶಿವಜ್ಞಾನಂ ಅವರನ್ನು ಮದ್ರಾಸ್ ಹೈಕೋರ್ಟ್ನಿಂದ ಕಲ್ಕತ್ತಾ ಹೈಕೋರ್ಟ್ ಗೆ ವರ್ಗಾವಣೆ ಮಾಡಲಾಗಿದೆ. ಅದೇ ರೀತಿ, ಹಿಮಾಚಲ ಪ್ರದೇಶ ಹೈಕೋರ್ಟ್ ನ ನ್ಯಾಯಮೂರ್ತಿ ಸುರೇಶ್ವರ್ ಠಾಕೂರ್ ಅವರನ್ನು ಪಂಜಾಬ್ ಮತ್ತು ಹರಿಯಾಣಕ್ಕೆ, ತೆಲಂಗಾಣ ಹೈಕೋರ್ಟ್ ನ ನ್ಯಾಯಮೂರ್ತಿ ಟಿ ಅಮರನಾಥ ಗೌಡ್ ಅವರನ್ನು ತ್ರಿಪುರಾಕ್ಕೆ ಕಳುಹಿಸಲಾಗಿದೆ. ಅಲಹಾಬಾದ್ ಹೈಕೋರ್ಟ್ ನ ನ್ಯಾಯಮೂರ್ತಿ ಸುಭಾಷ್ ಚಂದ್ ಅವರನ್ನು ಜಾರ್ಖಂಡ್ ಹೈಕೋರ್ಟ್ ಗೆ ವರ್ಗಾಯಿಸಲಾಗಿದೆ.

Edited By : Nirmala Aralikatti
PublicNext

PublicNext

11/10/2021 05:11 pm

Cinque Terre

25.54 K

Cinque Terre

0

ಸಂಬಂಧಿತ ಸುದ್ದಿ