ಶೋಪಿಯಾನ್: ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ತಲ್ರಾನ್ ಗ್ರಾಮದಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಅಡಗು ತಾಣದ ಮೇಲೆ ದಾಳಿ ನಡೆಸಿದ ಭದ್ರತಾ ಪಡೆಗಳ ಯೋಧರು ಉಗ್ರರನ್ನು ಹೊಡೆದುರುಳಿಸಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಡಿದ್ದಾರೆ.
CRPF, ಜಮ್ಮು & ಕಾಶ್ಮೀರ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದರು. ಮೃತಪಟ್ಟ ಮೂವರು ಉಗ್ರರಲ್ಲಿ ಒಬ್ಬ ಗಂದರ್‌ಬಾಲ್‌ನ ಮುಖ್ತಾರ್ ಶಾ ಎಂದು ಗುರುತಿಸಲಾಗಿದ್ದು, ಆತ ಬಿಹಾರದ ವ್ಯಾಪಾರಿ ವೀರೇಂದ್ರ ಪಾಸ್ವಾನ್‌ನನ್ನು ಹತ್ಯೆಗೈದು ಶೋಪಿಯಾನ್‌ಗೆ ಬಂದಿದ್ದ ಎಂದು ಕಾಶ್ಮೀರ ಐಜಿಪಿ ವಿಜಯ್‌ಕುಮಾರ್ ಮಾಹಿತಿ ನೀಡಿದ್ದಾರೆ. ಶೋಪಿಯಾನ್ ಜಿಲ್ಲೆಯ ಇಮಾಮ್ಸಾಹೇಬ್ ಪ್ರದೇಶದ ತಲ್ರಾನ್ ಗ್ರಾಮದಲ್ಲಿ ನಡೆದ ದಾಳಿಯಲ್ಲಿ ಮೃತಪಟ್ಟಿರುವುದು ಲಷ್ಕರ್ ಎ ತಯ್ಯಬಾ ಸಂಘಟನೆಯ ಉಗ್ರರು ಎಂಬ ಮಾಹಿತಿ ಇದೆ.
PublicNext
12/10/2021 08:16 am