ಹೊಸದಿಲ್ಲಿ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಆರೋಪಿಗಳ ಪೈಕಿ ಒಬ್ಬನ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ ( ಕೋಕಾ) ಯಡಿ ಹೇರಲಾಗಿದ್ದ ಪ್ರಕರಣವನ್ನು ರದ್ದುಗೊಳಿಸಿ ಕರ್ನಾಟಕ ಹೈಕೋರ್ಟ್ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಪುರಸ್ಕರಿಸಿದೆ.
2017ರಲ್ಲಿ ನಡೆದಿದ್ದ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಕೇಸ್ ನಲ್ಲಿ ಕೋಕಾ ಕಾಯ್ದೆಯಡಿ (ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ) ಆರೋಪಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಕೇಸ್ ನ್ನು ಈ ಹಿಂದೆ ಹೈಕೋರ್ಟ್ ರದ್ದು ಮಾಡಿತ್ತು. ಇದೀಗ ಹೈಕೋರ್ಟ್ ಆದೇಶ ರದ್ದು ಪಡಿಸಿರುವ ಸುಪ್ರೀಂ ಕೋರ್ಟ್, ಪ್ರಕರಣ ಎತ್ತಿಹಿಡಿದಿದೆ.
ಹೈಕೋರ್ಟ್ ಆದೇಶ ಪ್ರಶ್ನಿಸಿ ಕವಿತಾ ಲಂಕೇಶ್, ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಸದ್ಯ ಹೈಕೋರ್ಟ್ ಆದೇಶ ರದ್ದು ಮಾಡಿ, ಆರೋಪಿ ಮೋಹನ್ ವಿರುದ್ಧ ದಾಖಲಾಗಿದ್ದ ಕೇಸ್ ನ್ನು ಸುಪ್ರೀಂ ಎತ್ತಿಹಿಡಿದಿದೆ.
PublicNext
21/10/2021 01:41 pm