ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಣಿವೆ ರಾಜ್ಯದಲ್ಲಿಯ ದಾಳಿ ಹಿಂದೆ ಪಾಕ್ ಕೈವಾಡ

ನವದೆಹಲಿ: ಕಣಿವೆ ರಾಜ್ಯದಲ್ಲಿ ಉಗ್ರರ ಅಟ್ಟಹಾಸ ಹೆಚ್ಚಿದರ ಹಿಂದೆ ಉೊಆಕ್ ಕೈವಾಡವಿದೆ ಎಂದು ತಿಳಿದು ಬಂದಿದೆ.ಜಮ್ಮು ಕಾಶ್ಮೀರದಲ್ಲಿ ಕಳೆದೊಂದು ವಾರದಿಂದ ಉಗ್ರರ ಅಟ್ಟಹಾಸ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಕಾಶ್ಮೀರ ಗಡಿಯ ಪೂಂಚ್ ಸೇರಿದಂತೆ ಹಲವೆಡೆ ಸೇನಾ ಪಡೆ ಎನ್ ಕೌಂಟರ್ ಕಾರ್ಯಾಚರಣೆ ನಡೆಸುತ್ತಿದೆ.

ಈ ಕಾರ್ಯಾಚರಣೆಯಲ್ಲಿ ಇದುವರೆಗೂ 15ಕ್ಕೂ ಹೆಚ್ಚು ಉಗ್ರರನ್ನು ಹತ್ಯೆ ಮಾಡಲಾಗಿದ್ದು, ಹಲವು ಭಾರತೀಯ ಸೈನಿಕರು ಕೂಡ ಪ್ರಾಣ ಕಳೆದುಕೊಂಡಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ನಡೆಯುತ್ತಿರುವ ಉಗ್ರರ ದಾಳಿಯ ಹಿಂದೆ ಪಾಕಿಸ್ತಾನದ ಕೈವಾಡವಿದೆ ಎಂಬುದು ವಿಡಿಯೋದಿಂದ ಬಯಲಾಗಿದೆ.

ಕಾಶ್ಮೀರದ ಉಗ್ರನಿಗೆ ಪಾಕಿಸ್ತಾನದ ಉಗ್ರ ತರಬೇತಿ ನೀಡುತ್ತಿರುವ ವಿಡಿಯೋವೊಂದು ವೈರಲ್ ಆಗಿದ್ದು, ಜಮ್ಮು ಕಾಶ್ಮೀರದ ಪೊಲೀಸರು ಕಾಶ್ಮೀರದ ಶಂಕಿತ ಉಗ್ರನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ ನಂತರ ಈ ವಿಡಿಯೋ ಹೊರಬಿದ್ದಿದೆ. ಬಂಧಿಸಲ್ಪಟ್ಟ ಆರೋಪಿಯ ಬಳಿ ಈ ವಿಡಿಯೋ ಪತ್ತೆಯಾಗಿದೆ.

Edited By : Nirmala Aralikatti
PublicNext

PublicNext

22/10/2021 03:10 pm

Cinque Terre

38.18 K

Cinque Terre

5

ಸಂಬಂಧಿತ ಸುದ್ದಿ