ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಅವರನ್ನು ಬಂಧಿಸಿದ ಎನ್ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ಮೇಲೆ ಲಂಚದ ಆರೋಪಗಳು ಕೇಳಿಬಂದ ಬೆನ್ನಲ್ಲೇ ಸಮೀರ್ ವಾಂಖೆಡೆ ಅವರಿಗೆ ಬಂಧನ ಭೀತಿ ಶುರುವಾಗಿದೆ. ಆರೋಪಕ್ಕೆ ಸಂಬಂಧ ಪಟ್ಟಂತೆ ತನಿಖೆ ನಡೆಸಲು ಮಹಾರಾಷ್ಟ್ರ ಸರ್ಕಾರ ವಿಶೇಷ ತನಿಖಾ ತಂಡ ನೇಮಿಸಿದೆ. ಮುಂಬೈ ಪೊಲೀಸರು ಸಮೀರ್ ವಾಂಖೆಡೆ ಅವರನ್ನು ವಿಚಾರಣೆಗೆ ಒಳಪಡಿಸಲು ಸಜ್ಜಾಗಿದ್ದು,ಇದನ್ನು ಪ್ರಶ್ನಿಸಿ ವಾಂಖೆಡೆ ಬಾಂಬೆ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.
ನನ್ನನ್ನು ವೈಯಕ್ತಿಯವಾಗಿ ಟಾರ್ಗೆಟ್ ಮಾಡಲಾಗಿದೆ. ಬಂಧನ ಆಗದಂತೆ ತಡೆ ನೀಡಬೇಕು' ಎಂದು ಹೇಳಿರುವ ಸಮೀರ್ ವಾಂಖೆಡೆ ಅವರ ಮನವಿಯನ್ನು ಕೋರ್ಟ್ ತಿರಸ್ಕರಿಸಿದೆ. ತನಿಖೆಯನ್ನು ಕೈಬಿಡಲು ಸಾಧ್ಯವಿಲ್ಲ ಎಂದು ಆದೇಶ ನೀಡಿದೆ.
ಒಂದು ವೇಳೆ ಭ್ರಷ್ಟಚಾರ ಆರೋಪದ ಮೇಲೆ ಕೇಸ್ ದಾಖಲಿಸಿ ಸಮೀರ್ ವಾಂಖೆಡೆ ಅವರನ್ನು ಬಂಧಿಸುವುದಾದರೆ ಮೂರು ದಿನ ಮುಂಚಿತವಾಗಿ ನೋಟಿಸ್ ನೀಡಲಾಗುವುದು ಎಂದು ಮುಂಬೈ ಸರ್ಕಾರದ ಪರ ವಕೀಲರು ತಿಳಿಸಿದ್ದಾರೆ. ಒಟ್ಟಿನಲ್ಲಿ ಸಮೀರ್ ವಾಂಖೆಡೆ ಅವರಿಗೆ ಸಂಕಷ್ಟ ಎದುರಾಗುವ ಸಾಧ್ಯತೆ ದಟ್ಟವಾಗಿದೆ.
PublicNext
29/10/2021 11:26 am