ಮುಂಬೈ: ಹಫ್ತಾ ವಸೂಲಿ ಆರೋಪ ಎದುರಿಸುತ್ತಿರುವ ಮುಂಬೈ ಮಹಾನಗರ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಹಾಗೂ ಇತರ ಇಬ್ಬರು ಆರೋಪಿಗಳ ವಿರುದ್ಧ ಮುಂಬೈನ ಎಸ್ ಪ್ಲೆನೇಡ್ ಕೋರ್ಟ್ ಜಾಮೀನು ರಹಿತ ವಾರಂಟ್ ಆದೇಶ ನೀಡಿದೆ.
ಅಧಿಕೃತ ಮಾಹಿತಿಯ ಪ್ರಕಾರ, ಇದೇ ಪ್ರಕರಣದ ಆರೋಪಿಗಳಾದ ವಿನಯ್ ಸಿಂಗ್ ಮತ್ತು ರಿಯಾಜ್ ಭಾಟಿ ಅವರ ವಿರುದ್ಧವೂ ಈ ಬಂಧನ ವಾರಂಟ್ ಹೊರಡಿಸಲಾಗಿದೆ. ಸದ್ಯ ಭಾಟಿ ತಲೆಮರೆಸಿಕೊಂಡಿದ್ದಾರೆ. ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರು 100 ಕೋಟಿ ಹಫ್ತಾ ವಸೂಲಿ ಮಾಡುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದರು ಎಂದು ಪರಮ್ ಬೀರ್ ಸಿಂಗ್ ಗಂಭೀರ ಆರೋಪ ಮಾಡಿದ್ದರು. ಅಲ್ಲದೆ ಈ ಸಂಬಂಧ ಸಿಎಂ ಉದ್ಧವ್ ಠಾಕ್ರೆಗೆ ಪತ್ರ ಬರೆದಿದ್ದರು. ಮಹಾರಾಷ್ಟ್ರ ವಿಕಾಸ್ ಅಘಾಡಿಯಲ್ಲೂ ಈ ಪತ್ರ ತೀವ್ರ ಸಂಚಲನ ಮೂಡಿಸಿತ್ತು.
PublicNext
30/10/2021 10:09 pm