ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕರ್ನಾಟಕ ಹೈಕೋರ್ಟ್ ಗೆ ಮೂವರು ಹೆಚ್ಚುವರಿ ನ್ಯಾಯಮೂರ್ತಿಗಳ ನೇಮಕ

ಬೆಂಗಳೂರು: ವಕೀಲರಾದ ಅನಂತ್ ರಾಮನಾಥ್ ಹೆಗಡೆ, ಸಿದ್ದಯ್ಯ ರಾಚಯ್ಯ ಮತ್ತು ಕಣ್ಣನ್ ಕುಳೈಲ್ ಶ್ರೀಧರನ್ ಹೇಮಲೇಖಾ ಅವರನ್ನು ಎರಡು ವರ್ಷಗಳವರೆಗೆ ಕರ್ನಾಟಕ ಹೈಕೋರ್ಟ್ ನ ಹೆಚ್ಚುವರಿ ನ್ಯಾಯಮೂರ್ತಿಗಳನ್ನಾಗಿ ನೇಮಿಸಿ

ಕೇಂದ್ರ ಸರ್ಕಾರ ಬುಧವಾರ ಅಧಿಸೂಚನೆ ಹೊರಡಿಸಿದೆ.

ಸುಪ್ರೀಂ ಕೋರ್ಟ್ ಕೊಲಿಜಿಯಂ ಅಕ್ಟೋಬರ್ 6ರಂದು ಈ ಮೂವರು ವಕೀಲರನ್ನು ನ್ಯಾಯಮೂರ್ತಿಗಳನ್ನಾಗಿ ನೇಮಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿತ್ತು. ಕರ್ನಾಟಕ ಹೈಕೋರ್ಟ್ ನಲ್ಲಿ ಒಟ್ಟು 62 ನ್ಯಾಯಮೂರ್ತಿಗಳ ಹುದ್ದೆಗಳಿದ್ದು, ಸದ್ಯ 43 ನ್ಯಾಯಮೂರ್ತಿಗಳು ಕಾರ್ಯನಿರ್ವಹಿಸುತ್ತಿದ್ದಾರೆ.

Edited By : Nirmala Aralikatti
PublicNext

PublicNext

03/11/2021 08:38 pm

Cinque Terre

39.51 K

Cinque Terre

0

ಸಂಬಂಧಿತ ಸುದ್ದಿ