ಬೆಂಗಳೂರು: ಅವಧಿ ಪೂರ್ಣಗೊಂಡ ರಾಜ್ಯದ 56 ನಗರ ಸ್ಥಳೀಯ ಸಂಸ್ಥೆಗಳಿಗೆ 2021ರ ಡಿಸೆಂಬರ್ 30 ರೊಳಗೆ ಚುನಾವಣೆ ನಡೆಸುವಂತೆ ಹೈಕೋರ್ಟ್ ಆದೇಶ ನೀಡಿದೆ.
ಅವಧಿ ಮುಕ್ತಾಯಗೊಂಡ ಸ್ಥಳೀಯ ಸಂಸ್ಥೆಗಳಿಗೆ ನಿಗದಿತ ಕಾಲಮಿತಿಯಲ್ಲಿ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ ಅಗತ್ಯ ನಿರ್ದೇಶನ ನೀಡಲು ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿದೆ.
ಡಿಸೆಂಬರ್ 30ರೊಳಗಾಗಿ ಎಲ್ಲ ಚುನಾವಣೆ ಪ್ರಕ್ರಿಯೆ ಮುಗಿಸುವ ಜವಾಬ್ದಾರಿ ಈಗ ಚುನಾವಣಾ ಆಯೋಗದ ಮೇಲಿದೆ.
PublicNext
17/11/2021 04:04 pm