ತಿರುವನಂತಪುರಂ: ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವನ್ನು ತೆಗೆದುಹಾಕುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ಕೇರಳ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.
ಈ ಅರ್ಜಿಯು 'ರಾಜಕೀಯ ಪ್ರೇರಿತವಾಗಿದೆ' ಹಾಗೂ ಕ್ಷುಲ್ಲಕವಾಗಿದೆ ಮತ್ತು ಪ್ರಚಾರದ ಉದ್ದೇಶ ಹೊಂದಿದೆ ಎಂದ ನ್ಯಾಯಾಲಯ ಅರ್ಜಿದಾರರ ಮೇಲೆ 1 ಲಕ್ಷ ರೂ ದಂಡ ವಿಧಿಸಿದೆ. ಕೋವಿಡ್ 19 ಲಸಿಕೆ ಪ್ರಮಾಣ ಪತ್ರದಲ್ಲಿನ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರ ತೆಗೆದು ಹಾಕಬೇಕು ಎಂದು ಕೋರಿ ಅರ್ಜಿದಾರ ಪೀಟರ್ ಮೈಲಿಪರಂಪಿಲ್ ಕೇರಳ ಹೈ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಇನ್ನು ನಿಗದಿತ ಅವಧಿಯಲ್ಲಿ ದಂಡ ಪಾವತಿಸದೇ ಇದ್ದಲ್ಲಿ ಕೇರಳ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ಅರ್ಜಿದಾರರ ಆಸ್ತಿಯಲ್ಲಿ ದಂಡದ ಮೊತ್ತವನ್ನು ವಸೂಲಿ ಮಾಡಲಾಗುವುದು ಎಂದು ಕೇರಳ ಹೈಕೋರ್ಟ್ ಹೇಳಿದೆ.
PublicNext
21/12/2021 06:14 pm