ಬೆಂಗಳೂರು: ಹೊಸ ವರ್ಷಕ್ಕೆ ಇನ್ನೇನು ಕ್ಷಣ ಗಣನೆ ಶುರುವಾಗಿದೆ ಅದೇ ರೀತಿ ಹೊಟೇಲ್, ಮಾಲ್, ರೆಸ್ಟೋರೆಂಟ್, ಕ್ಲಬ್ ,ಪಬ್ ನಲ್ಲಿ ವಿಶೇಷ ಕಾರ್ಯಕ್ರಮಗಳಿಗೆ ನಿಷೇದಾಜ್ಞೆಯನ್ನು ಹಾಕಲಾಗಿದೆ. ಯಾರಾದರೂ ನಿಷೇಧಾಜ್ಞೆಯನ್ನು ಉಲ್ಲಂಘನೆ ಮಾಡಿದಲ್ಲಿ ಅಂತವರ ವಿರುದ್ಧ IPC 188 ಸೆಕ್ಷನ್, NDMA, ಮತ್ತು KEDC ಆ್ಯಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುತ್ತದೆ.
ಡಿಜೆ , ವಿಶೇಷ ಕಾರ್ಯಕ್ರಮ, ಸಂಗೀತ ಮನೋರಂಜನೆ ,ಡ್ಯಾನ್ಸ್ ಪ್ರೋಗ್ರಾಮ್ ನಿಷೇಧ ಹೊಸ ವರ್ಷಕ್ಕೆ ನಿಷೇಧಾಜ್ಞೆ ಜಾರಿ ಮಾಡಿ ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನ ಪಾಲನೆ ಮಾಡಬೇಕು. ಸರ್ಕಾರ, ಪೊಲೀಸ್ ಇಲಾಖೆ, ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ ಪಾಲನೆ ಮಾಡಬೇಕು ಸಾರ್ವಜನಿಕ ಸ್ಥಳಗಳಲ್ಲಿ ಜನರು ಗುಂಪು ಸೇರಿ ಹೊಸ ವರ್ಷ ಸಂಭ್ರಮಾಚರಣೆ ಮಾಡುವಂತಿಲ್ಲ. ಮನೆ, ಪ್ರೈವೇಟ್
ಕ್ಲಬ್ ಗಳಲ್ಲಿ ಸಂಬಂಧಿಕರು, ಕ್ಲಬ್ ನ ಸದಸ್ಯರು ಮಾತ್ರ ಭಾಗವಹಿಸಬಹುದು ಎಂದು ಬೆಂಗಳೂರು ನಗರ ಪೋಲಿಸ್ ಆಯುಕ್ತ ಕಮಲ್ ಪಂತ್ ಈ ಮೂಲಕ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದರು.
ನಾಳೆ ಸಂಜೆ 6 ಗಂಟೆಯಿಂದಲೇ 144 ಸೆಕ್ಷನ್ ನಗರದಲ್ಲಿ ಜಾರಿ ಮಾಡಲಿದ್ದು. ಜ.1-2022. ಸಂಜೆ 6 ಗಂಟೆಯಿಂದ ಬೆಳಗ್ಗೆ 5 ಗಂಟೆ ವರೆಗೆ ನಿಷೇಧಾಜ್ಞೆ ಜಾರಿ ಬಗ್ಗೆ ಆದೇಶ ಹೊರಡಿಸಿದ್ದಾರೆ.
PublicNext
31/12/2021 02:58 pm