ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಿಗಿ ಭದ್ರತೆ ನಡುವೆ ಕೋರ್ಟ್‌ಗೆ ಹಾಜರಾದ ವಿಚಾರವಾದಿ ಭಗವಾನ್

ಬೆಂಗಳೂರು: ಶ್ರೀರಾಮ ಹಾಗೂ ರಾಮಾಯಣ, ಮಹಾಭಾರತ ಗ್ರಂಥಗಳಿಗೆ ಅವಮಾನ ಮಾಡಿದ ಆರೋಪ ಎದುರಿಸುತ್ತಿರುವ ವಿಚಾರವಾದಿ ಕೆ.ಎಸ್‌ ಭಗವಾನ್ ಬಿಗಿ ಭದ್ರತೆಯ ನಡುವೆ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.

ಇದೇ ಪ್ರಕರಣದ ಇನ್ನಿಬ್ಬರು ಆರೋಪಿಗಳಾದ ಸಾಹಿತಿ ಚಂದ್ರಶೇಖರ್ ಪಾಟೀಲ್ ಹಾಗೂ ತಮಿಳ್ ಸೆಲ್ವಿ ಅವರಿಗೂ ಸಮನ್ಸ್ ಜಾರಿಯಾಗಿತ್ತು. ಆದರೆ ಇವರಿಬ್ಬರೂ ಕೋರ್ಟ್‌ಗೆ ಹಾಜರಾಗದ ಹಿನ್ನೆಲೆಯಲ್ಲಿ ವಿಚಾರಣೆಯನ್ನು 2020ರ ಏಪ್ರಿಲ್ 4ಕ್ಕೆ ಮುಂದೂಡಲಾಗಿದೆ.

ನ್ಯಾಯಾಲಯಕ್ಕೆ ಹಾಜರಾದ ಕೆ.ಎಸ್ ಭಗವಾನ್ ಅವರನ್ನು ನ್ಯಾಯಾಧೀಶ ವೀರನಗೌಡ .ಎಸ್. ಪಾಟೀಲ್ ವಿಚಾರಣೆ ನಡೆಸಿದ್ದಾರೆ. ಹಾಗೂ ವಕೀಲ ಸಿ.ಎಚ್ ಹನುಮಂತರಾಯ ವಕಾಲತ್ತು ವಹಿಸಿದ್ದರು. ಈ ಹಿಂದೆ ವಿಚಾರಣೆಗೆ ಹಾಜರಾಗಿದ್ದ ಕೆ.ಎಸ್ ಭಗವಾನ್ ಮುಖಕ್ಕೆ ನ್ಯಾಯವಾದಿ ಮೀರಾ ರಾಘವೇಂದ್ರ ಅವರು ಮಸಿ ಬಳಿದಿದ್ದರು. ಈ ಹಿನ್ನೆಲೆಯಲ್ಲಿ ಭಗವಾನ್ ಅವರಿಗೆ ಭದ್ರತೆ ಒದಗಿಸಲಾಗಿತ್ತು.

Edited By : Nagaraj Tulugeri
PublicNext

PublicNext

01/01/2022 05:05 pm

Cinque Terre

108.57 K

Cinque Terre

20

ಸಂಬಂಧಿತ ಸುದ್ದಿ