ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪ್ರಧಾನಿಗೆ ಭದ್ರತಾ ಲೋಪ: ವಿಚಾರಣೆ ನಂತರ ಸುಪ್ರೀಂಕೋರ್ಟ್ ಹೇಳಿದ್ದೇನು?

ನವದೆಹಲಿ: ಪ್ರಧಾನಿ ಮೋದಿ ಪಂಜಾಬ್ ಭೇಟಿ ವೇಳೆ ಭದ್ರತಾ ಲೋಪವಾದ ಕುರಿತು ಪಂಜಾಬ್ ಸರ್ಕಾರದ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು‌.

ಇ‌ಂದು ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರಿಗೆ ಮೋದಿ ಪ್ರಯಾಣದ ಎಲ್ಲ ದಾಖಲೆಗಳನ್ನು ಸುರಕ್ಷಿತಗೊಳಿಸಿಕೊಳ್ಳಲು ನಿರ್ದೇಶನ ನೀಡಿದೆ.

ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಬೇಕು ಎಂಬ ಅರ್ಜಿದಾರನ ಮನವಿಯನ್ನು ಬೆಂಬಲಿಸಿದ ಕೇಂದ್ರ ಸರ್ಕಾರದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಕೋರ್ಟ್‌ಗೆ ತಿಳಿಸಿದ್ದಾರೆ. ಈ ಘಟನೆ ಗಂಭೀರ ಪರಿಸ್ಥಿತಿಯನ್ನು ಹುಟ್ಟು ಹಾಕಿದೆ ಎಂದು ಮೆಹ್ತಾ ಅವರು ಮೋದಿ ಭೇಟಿ ವೇಳೆಯ ಭದ್ರತೆಗೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಸಂಗ್ರಹಿಸಲು ಪಂಜಾಬ್ ಸರ್ಕಾರಕ್ಕೆ ತಿಳಿಸುವಂತೆ ಸರ್ವೋಚ್ಛ ನ್ಯಾಯಾಲಯಕ್ಕೆ ಒತ್ತಾಯಿಸಿದ್ದರು.

Edited By : Nagaraj Tulugeri
PublicNext

PublicNext

07/01/2022 01:31 pm

Cinque Terre

25.77 K

Cinque Terre

16

ಸಂಬಂಧಿತ ಸುದ್ದಿ