ನವದೆಹಲಿ: ಪಂಜಾಬ್‌ನಲ್ಲಿ ಉಂಟಾದ ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತಾ ಲೋಪ ಕುರಿತು ತನಿಖೆ ನಡೆಸಲು ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶರ ನೇತೃತ್ವದಲ್ಲಿ ಸ್ವತಂತ್ರ ಸಮಿತಿಯನ್ನು ರಚಿಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ.
ಪ್ರಧಾನಿ ಮೋದಿ ಮತ್ತು ಬೆಂಗಾವಲು ಪಡೆಯಿದ್ದ ವಾಹನಗಳು ಇದೇ 5ರಂದು ಫಿರೋಜ್‌ಪುರ್‌ನ ಮೇಲ್ಸೇತುವೆಯಲ್ಲಿ 15 ನಿಮಿಷ ಸ್ಥಗಿತವಾಗಿದ್ದವು. ಆಗ ರಸ್ತೆಯಲ್ಲಿ ಪ್ರತಿಭಟನೆ ನಡೆಯುತ್ತಿತ್ತು. ಇದು ಭದ್ರತಾ ವೈಫಲ್ಯದ ಚರ್ಚೆಗೆ ಆಸ್ಪದವಾಗಿತ್ತು. ಈ ಬಗ್ಗೆ ಲಾಯರ್ಸ್ ವಾಯ್ಸ್ ಸಂಘಟನೆ ಅರ್ಜಿ ಸಲ್ಲಿಸಿತ್ತು.
ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದಲ್ಲಿ, ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ಹಿಮಾಕೊಹ್ಲಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ಲಾಯರ್ಸ್ ವಾಯ್ಸ್ ಸಂಘಟನೆಯ ಅರ್ಜಿ ವಿಚಾರಣೆಯನ್ನು ಇಂದು ನಡೆಸುತ್ತಿದೆ.
PublicNext
10/01/2022 12:53 pm