ಬೆಂಗಳೂರು: ಪೊಲೀಸ್ 'ಸಿಂಗಂ' ಎಂದು ಕರೆಸಿಕೊಳ್ಳುವ ಸಿಐಡಿ ಎಸ್‌ಪಿ ರವಿ ಡಿ. ಚನ್ನಣ್ಣನವರ್ ಸೇರಿದಂತೆ ನಾಲ್ವರು ಪೊಲೀಸ್ ಅಧಿಕಾರಿಗಳ ವಿರುದ್ಧ ಗಂಭೀರ ಆರೋಪವೊಂದು ಕೇಳಿ ಬಂದಿದೆ. ಇದರಿಂದಾಗಿ ರವಿ ಡಿ. ಚನ್ನಣ್ಣನವರ್ ಅವರು, ತಮ್ಮ ವಿರುದ್ಧ ಯಾವುದೇ ಸುದ್ದಿ ಪ್ರಕಟಿಸಬಾರದು ಎಂದು 'ದಿ ಫೈಲ್' ಸೇರಿದಂತೆ ಮಾಧ್ಯಮಗಳ ವಿರುದ್ಧ ನ್ಯಾಯಾಲಯದಿಂದ ಮಧ್ಯಂತರ ಪ್ರತಿಬಂಧಕಾಜ್ಞೆ ಪಡೆದುಕೊಂಡಿದ್ದಾರೆ.
ರಾಜ್ಯ ಮತ್ತು ರಾಷ್ಟ್ರ ಮಟ್ಟದ ವಿವಿಧ ದಿನಪತ್ರಿಕೆಗಳು, ಸಂಜೆ ಪತ್ರಿಕೆಗಳು, ಸುದ್ದಿ ವಾಹಿನಿಗಳು ಸೇರಿದಂತೆ 37 ಮಾಧ್ಯಮ ಸಂಸ್ಥೆಗಳನ್ನು ಪ್ರತಿವಾದಿಗಳನ್ನಾಗಿ ಹೆಸರಿಸಲಾಗಿದೆ. ಅರ್ಜಿಯ ವಿಚಾರಣೆ ನಡೆಸಿದ ಸಿಟಿ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರು ಮಧ್ಯಂತರ ಪ್ರತಿಬಂಧಕಾಜ್ಞೆ ನೀಡಿ ಜನವರಿ 14ರಂದು ಆದೇಶ ಹೊರಡಿಸಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು 2022ರ ಫೆಬ್ರುವರಿ 1ಕ್ಕೆ ಮುಂದೂಡಲಾಗಿದೆ.
PublicNext
15/01/2022 03:11 pm