ಮೈಸೂರು: ಮಹಿಳಾ ಸಬ್ ಇನ್ಸ್ಪೆಕ್ಟರ್ ಯಾಸ್ಮಿನ್ ತಾಜ್ ಅವರು ಈಗ ಮತ್ತೊಂದು ಕಿರಿಕ್ ಮಾಡಿಕೊಂಡಿದ್ದಾರೆ. ಈ ಘಟನೆಯ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಹೌದು. ಮೈಸೂರು ನಗರದ ಎಸ್ಪಿ ಕಚೇರಿ ವೃತ್ತದ ಬಳಿ ಯಾಸ್ಮಿನ್ ತಾಜ್ ಸ್ಕೂಟರ್ನಲ್ಲಿ ತೆರಳುತ್ತಿದ್ದಾಗ ಆಟೋವೊಂದು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದನ್ನೇ ನೆಪವಾಗಿಟ್ಟುಕೊಂಡು ಸಾರ್ವಜನಿಕವಾಗಿಯೇ ಚಾಲಕನ ಮೇಲೆ ಅವಾಚ್ಯ ಶಬ್ದದಿಂದ ನಿಂದಿಸಿ ಗಲಾಟೆ ಮಾಡಿದ್ದಾರೆ. ಈ ದೃಶ್ಯವನ್ನು ಸ್ಥಳದಲ್ಲಿದ್ದವರು ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.
ಈ ಹಿಂದೆ ಅಂದ್ರೆ ಮೇ 2020ರಂದು ನಂಜನಗೂಡಿನ ಪೆಟ್ರೋಲ್ ಬಂಕ್ನಲ್ಲಿ ತಮ್ಮ ಜೀಪ್ಗೆ ಡೀಸೆಲ್ ಹಾಕಿಲ್ಲ ಎಂದು ಯಾಸ್ಮಿನ್ ತಾಜ್ ರಂಪಾಟ ಮಾಡಿದ್ದರು. ಈ ಮೂಲಕ ದೊಡ್ಡ ವಿವಾದವನ್ನೇ ಸೃಷ್ಟಿಸಿದ್ದರು.
PublicNext
19/01/2022 04:51 pm