ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕ್ರೀಡಾ ಸಂಕೀರ್ಣಕ್ಕೆ ಟಿಪ್ಪು ಹೆಸರು ವಿರೋಧಿಸಿ ಪ್ರತಿಭಟನೆ; ಬಿಜೆಪಿ, ಬಜರಂಗದಳದ 64 ಮಂದಿ ಅರೆಸ್ಟ್

ಮುಂಬೈ: ಮುಂಬೈನ ಮಲಾಡ್‌ನಲ್ಲಿರುವ ಕ್ರೀಡಾ ಸಂಕೀರ್ಣಕ್ಕೆ ಟಿಪ್ಪು ಸುಲ್ತಾನ್ ಹೆಸರಿಡುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಮತ್ತು ಬಜರಂಗದಳ ಕಾರ್ಯಕರ್ತರನ್ನು ಮುಂಬೈ ಪೊಲೀಸರು ಬುಧವಾರ ಬಂಧಿಸಿದ್ದಾರೆ.

"ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಪ್ರತಿಭಟನೆ ನಡೆಸಿದ್ದಕ್ಕಾಗಿ ನಾವು ಎರಡು ವಿಭಿನ್ನ ಸ್ಥಳಗಳಿಂದ ಬಿಜೆಪಿ ಮತ್ತು ಬಜರಂಗದಳದ 64 ಕಾರ್ಯಕರ್ತರನ್ನು ಬಂಧಿಸಿದ್ದೇವೆ" ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಲ್ವಾನಿ ಪ್ರದೇಶದಲ್ಲಿನ ನವೀಕರಿಸಲಾದ ಪಾರ್ಕ್ ಅನ್ನು ಸಚಿವ ಅಸ್ಲಾಂ ಶೇಖ್ ಬುಧವಾರ ಉದ್ಘಾಟಿಸಿದರು. ಈ ವೇಳೆ ಬಿಜೆಪಿ, ವಿಎಚ್‌ಪಿ ಕಾರ್ಯಕರ್ತರ ಪ್ರತಿಭಟನೆಗೆ ಬಗ್ಗೆ ಪ್ರತಿಕ್ರಿಯಿಸಿದ ಅವರು, 15 ವರ್ಷಗಳ ಹಿಂದಿನಿಂದಲೇ ಪಾರ್ಕ್‌ಗೆ ಟಿಪ್ಪು ಸುಲ್ತಾನ್‌ ಹೆಸರು ಇದೆ. ಆಗ ಇಲ್ಲದ ವಿರೋಧ ಈಗ ಏಕೆ' ಎಂದು ಪ್ರಶ್ನಿಸಿದ್ದಾರೆ.

ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್, 'ಹಿಂದುಗಳ ಮೇಲೆ ದೌರ್ಜನ್ಯವೆಸಗಿದ ವ್ಯಕ್ತಿಗೆ ಗೌರವ ನೀಡುತ್ತಿರುವುದಕ್ಕೆ ಕಾರಣವೇನು? ಈ ನಿರ್ಧಾರವನ್ನು ಸರ್ಕಾರ ಹಿಂಪಡೆಯಬೇಕು. ಈ ಸರ್ಕಾರ ಸ್ಥಿರವಾಗಿಲ್ಲ' ಎಂದು ಟೀಕಿಸಿದರು.

“ಎಂವಿಎ ಸರ್ಕಾರವು ಜನರ ಭಾವನೆಗಳನ್ನು ಅವಮಾನಿಸಿದೆ. ಇಂತಹ ಕೃತ್ಯವನ್ನು ಬಿಜೆಪಿ ಸಹಿಸುವುದಿಲ್ಲ. ಈ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ ಪೊಲೀಸ್ ರಕ್ಷಣೆ ನೀಡಿದ ರೀತಿ ದಿಗಿಲು ಹುಟ್ಟಿಸುವಂತಿದೆ. ಆದರೆ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಮತ್ತು ಬಜರಂಗದಳ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಇದು ಅತ್ಯಂತ ಖಂಡನೀಯ' ಫಡ್ನವೀಸ್ ಅಸಮಾಧಾನ ಹೊರ ಹಾಕಿದ್ದಾರೆ.

Edited By : Vijay Kumar
PublicNext

PublicNext

27/01/2022 01:06 pm

Cinque Terre

69.16 K

Cinque Terre

5