ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಜಮ್ಮು-ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ: ಐವರು ಭಯೋತ್ಪಾದಕರ ಹತ್ಯೆ

ಶ್ರೀನಗರ: ಜಮ್ಮು-ಕಾಶ್ಮೀರದ ಪುಲುವಾಮಾ ಹಾಗೂ ಬುಡಗಾಮ್ ಪ್ರದೇಶದಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಿದ ಸೈನಿಕರು ಐವರು ಭಯೋತ್ಪಾದಕರನ್ನು ಹತ್ಯೆಗೈದಿದ್ದಾರೆ. ಇದರಲ್ಲಿ ಜೈಶ್-ಎ-ಮೊಹಮ್ಮದ್ ಉಗ್ರಗಾಮಿ ಸಂಘಟನೆಯ ಕಮಾಂಡರ್ ಹಾಗೂ ಪಾಕಿಸ್ತಾನಿ ಭಯೋತ್ಪಾದಕ ಜಾಹಿದ್ ವಾನಿ ಕೂಡ ಹತನಾಗಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಇದು ಉಗ್ರರ ವಿರುದ್ಧದ ಹೋರಾಟದಲ್ಲಿ ಭದ್ರತಾ ಪಡೆಗಳಿಗೆ ಸಿಕ್ಕ ದೊಡ್ಡ ಯಶಸ್ಸು ಎಂದು ಕಾಶ್ಮೀರದ ಐಜಿಪಿ ಹೇಳಿದ್ದಾರೆ. ಜಾಹಿದ್ ಮಂಜೂರ್ ವಾನಿ ಜಮ್ಮು ಮತ್ತು ಕಾಶ್ಮೀರದಲ್ಲಿ ಜೈಶ್ ಭಯೋತ್ಪಾದಕರ ಪೈಕಿ ಒಬ್ಬನಾಗಿದ್ದ. ಫೆಬ್ರವರಿ 14, 2019 ರಂದು 40ಕ್ಕೂ ಹೆಚ್ಚು ಸಿಆರ್‌ಪಿಎಫ್ ಸಿಬ್ಬಂದಿ ಹುತಾತ್ಮರಾದ ಲೆಟ್‌ಪುರ ಘಟನೆಯಲ್ಲಿ ಜಾಹಿದ್ ಭಾಗಿಯಾಗಿದ್ದನು. ಕುಲ್ಗಾಮ್ ಜಿಲ್ಲೆಯಲ್ಲಿ ಪೋಲೀಸರ ಹತ್ಯೆ ನಂತರ ಈಗ ಪುಲ್ವಾಮಾದ ನೈರಾ ಪ್ರದೇಶದಲ್ಲಿ ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಹೆಚ್ಚಿನ ಸಂಖ್ಯೆಯ ಸೇನೆ ಮತ್ತು ಪೊಲೀಸ್ ತಂಡ ಸ್ಥಳದಲ್ಲಿ ಉಪಸ್ಥಿತರಿದ್ದು, ಸ್ಥಳವನ್ನು ವಶಪಡಿಸಿಕೊಂಡಿವೆ.

Edited By : Nagaraj Tulugeri
PublicNext

PublicNext

30/01/2022 09:20 am

Cinque Terre

92.97 K

Cinque Terre

12

ಸಂಬಂಧಿತ ಸುದ್ದಿ