ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರ ಜಿಲ್ಲೆಯ ಝಕುರಾ ಪ್ರದೇಶದಲ್ಲಿ ಭಾರತೀಯ ಸೇನೆಯು ಶನಿವಾರ ಬೆಳಗ್ಗೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹೊಡೆದುರುಳಿಸಿದೆ.
ಹತ್ಯೆಯಾದವರು ಭಯೋತ್ಪಾದಕ ಸಂಘಟನೆಯಾದ ಲಷ್ಕರ್- ಎ- ತೋಯ್ಬಾದ ಮತ್ತೊಂದು ಅಂಗವಾದ ಟಿಆರ್ಎಫ್ಗೆ ಸೇರಿದವರಾಗಿದ್ದಾರೆ. ಈ ಪೈಕಿ ಒಬ್ಬನನ್ನು ಇಖ್ಲಾಕ್ ಹಜಂ ಎಂದು ಗುರುತಿಸಲಾಗಿದ್ದು, ಇತ್ತೀಚೆಗೆ ಅನಂತ್‌ನಾಗ್‌ನ ಹಸನ್‌ಪೋರಾದಲ್ಲಿ ನಡೆದ ಹೆಡ್ಕಾನ್ಸ್ಟೇಬಲ್ ಅಲಿ ಮೊಹಮ್ಮದ್ ಹತ್ಯೆಯಲ್ಲಿ ಇಖ್ಲಾಕ್ ಭಾಗಿಯಾಗಿದ್ದ. ಕಾರ್ಯಾಚರಣೆಯ ಸ್ಥಳದಿಂದ ಎರಡು ಪಿಸ್ತೂಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಾಶ್ಮೀರ ಪೊಲೀಸರು ಟ್ವೀಟ್ ಮಾಡಿದ್ದಾರೆ.
ಫೆಬ್ರವರಿ 2ರಂದು ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಅಮಿಶಿಜಿಪೋರಾ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿದ್ದ ಭದ್ರತಾ ಪಡೆಗಳು ಓರ್ವ ಉಗ್ರನನ್ನು ಹೊಡೆದುರುಳಿಸಿದ್ದವು. ಈ ವೇಳೆ, ಭದ್ರತಾ ಪಡೆಯ ಓರ್ವ ಸಿಬ್ಬಂದಿಗೆ ಗಾಯವಾಗಿತ್ತು.
PublicNext
05/02/2022 12:05 pm