ಬೆಂಗಳೂರು: ಟ್ರಾಫಿಕ್ ಪೊಲೀಸರ ವಿರುದ್ಧ ಭ್ರಷ್ಟಾಚಾರ ದೂರುಗಳ ಹಿನ್ನೆಲೆ ಬಾಡಿ ಕ್ಯಾಮೆರಾ ಧರಿಸುವಂತೆ ಟ್ರಾಫಿಕ್ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಸ್ಮಾರ್ಟ್ ಟ್ರಾಫಿಕ್ ನಿರ್ವಹಣೆ ಜಾರಿಗೊಳಿಸಿ ಎಂದು ಕರ್ನಾಟಕ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ನಿರ್ದೇಶನ ನೀಡಿದೆ.
ಕರ್ತವ್ಯದ ವೇಳೆ ಬಾಡಿ ಕ್ಯಾಮರಾ ಧರಿಸಲು ಸೂಚಿಸಬೇಕು. ರಾಜ್ಯ ಸರ್ಕಾರ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಬೇಕು ಎಂದು ಹೇಳಲಾಗಿದೆ. ಕಟ್ಟುನಿಟ್ಟಾದ ಜಾರಿಗೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಇದಕ್ಕೆ ಪ್ರತಿಯಾಗಿ ಒಟ್ಟು 2,680 ಬಾಡಿ ಕ್ಯಾಮೆರಾಗಳ ಖರೀದಿಸಲಾಗುವುದು. ಈವರೆಗೆ 1,097 ಬಾಡಿ ಕ್ಯಾಮರಾ ಖರೀದಿಸಿರುವುದಾಗಿ ಹೈಕೋರ್ಟ್‌ಗೆ ರಾಜ್ಯ ಸರ್ಕಾರದ ಹೇಳಿಕೆ ನೀಡಿದೆ. ಖರೀದಿಸಿರುವ ಕ್ಯಾಮೆರಾ ಬಳಸಲು ಹೈಕೋರ್ಟ್ ನಿರ್ದೇಶನ ನೀಡಿದೆ. ಗೀತಾ ಮಿಶ್ರಾ ಎಂಬುವರು ಈ ಬಗ್ಗೆ ಪಿಐಎಲ್ ಸಲ್ಲಿಸಿದ್ದರು.
PublicNext
07/02/2022 09:41 pm