ಬೆಂಗಳೂರು: ಶಾಂತಿ ಸೌಹಾರ್ಧತೆಗೆ ಹೆಸರಾಗಿದ್ದ, ಭಾವೈಕ್ಯತೆಯ ಭೂಮಿಯಾಗಿದ್ದ ಕರುನಾಡು ಅಕ್ಷರಶಃ ಧರ್ಮಯುದ್ಧದಂತಾಗಿದೆ. ಹಿಜಾಬ್ ಮತ್ತು ಕೇಸರಿ ಶಾಲಿನ ನಡುವಿನ ಸಂಘರ್ಷ ಹಿಂಸಾರೂಪಕ್ಕೆ ತಿರುಗಿದ್ದು, ಕೋಮು ದ್ವೇಷ ಕೆರಳಿಸುವಂಥ ದೊಡ್ಡ ಬೆಂಕಿಯನ್ನೇ ಹೊತ್ತಿಸಿವೆ.
ಹಿಜಾಬ್ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್‌ನಲ್ಲಿ ಬುಧವಾರ ವಿಚಾರಣೆ ನಡೆಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಬೆಂಗಳೂರು ನಗರ, ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಹಿಜಾಬ್ ಧರಿಸಿದವರಿಗೆ ಪ್ರವೇಶ ನಿರ್ಬಂಧ ಮತ್ತು ವಸ್ತ್ರ ಸಂಹಿತೆ ಜಾರಿಗೊಳಿಸಿರುವ ಸರ್ಕಾರದ ಆದೇಶ ಪ್ರಶ್ನಿಸಿರುವ ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾ. ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕ ಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.
ಅರ್ಜಿದಾರ ವಿದ್ಯಾರ್ಥಿನಿ ಪರ ವಕೀಲ ಸಜ್ಜನ್ ಪೂವಯ್ಯ, ಸಂಜಯ್ ಹೆಗಡೆ ವಾದ ಮಂಡಿಸಿದರು. ಸರಕಾರದ ಪರ ವಕೀಲ ಎಜಿ ನಾವದಗಿ ವಾದ ಮಂಡನೆ ಮಾಡಿದರು.
PublicNext
09/02/2022 03:45 pm