ಬೆಂಗಳೂರು: ಹಿಜಾಬ್ ವಿವಾದ ರಾಜ್ಯದೆಲ್ಲೆಡೆ ಭುಗಿಲೆದ್ದಿರುವ ಮಧ್ಯೆಯೇ, ಆ ಕುರಿತು ವಿಚಾರಣೆ ನಡೆಸುತ್ತಿದ್ದ ಹೈಕೋರ್ಟ್‌ನ ಏಕಸದಸ್ಯ ಪೀಠವು ವಿಸ್ತೃತಪೀಠ ರಚನೆ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದೆ. ಅಲ್ಲದೆ ಈ ಬಗ್ಗೆ ಮುಖ್ಯ ನ್ಯಾಯಮೂರ್ತಿಗಳು ತೀರ್ಮಾನಿಸಲಿ ಎಂದು ಏಕಸದಸ್ಯಪೀಠ ಆದೇಶ ನೀಡಿತ್ತು.
ಅದರಂತೆ, ಇದೀಗ ಬಂದ ಅಪ್ಡೇಟ್ ಪ್ರಕಾರ, ಹಿಜಾಬ್ ವಿವಾದ ವಿಚಾರಣೆಗೆ ಹೈಕೋರ್ಟ್ ಪೂರ್ಣ ಪೀಠ ರಚನೆಯಾಗಿದೆ. ಮೂವರು ನ್ಯಾಯಮೂರ್ತಿಗಳ ಪೀಠವನ್ನು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ರಚಿಸಿದ್ದಾರೆ. ನ್ಯಾಯಪೀಠದಲ್ಲಿ ಸಿಜೆ ರಿತುರಾಜ್ ಅವಸ್ತಿ, ನ್ಯಾ. ಕೃಷ್ಣ ಎಸ್ ದೀಕ್ಷಿತ್, ನ್ಯಾ. ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ ಅವರಿದ್ದು, ಫೆ.10ರಂದು ಮಧ್ಯಾಹ್ನ 2.30ಕ್ಕೆ ಅರ್ಜಿ ಹೈಕೋರ್ಟ್ ನ್ಯಾಯಪೀಠದಿಂದ ವಿಚಾರಣೆ ನಡೆಯಲಿದೆ. ನಾಳೆಯೇ ಹಿಜಾಬ್ ಅರ್ಜಿ ಕುರಿತು ವಿಚಾರಣೆ ನಡೆಸಲಿದ್ದು, ತೀರ್ಪು ನೀಡೋ ಸಾಧ್ಯತೆ ಇದೆ.
PublicNext
09/02/2022 10:30 pm