ನವದೆಹಲಿ: ಹಿಜಾಬ್ ಅರ್ಜಿಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ನ ಮಧ್ಯಂತರ ಆದೇಶದ ವಿರುದ್ಧ ಸಲ್ಲಿಕೆಯಾಗಿದ್ದ ವಿಶೇಷ ರಜೆ ಅರ್ಜಿಯ ವಿಚಾರಣೆಗೆ ತುರ್ತು ಪಟ್ಟಿಯನ್ನು ನೀಡಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಸುಪ್ರೀಂ ಕೋರ್ಟ್ ಈ ವಿಷಯವನ್ನು ಸೂಕ್ತ ಸಮಯದಲ್ಲಿ ಕೈಗೆತ್ತಿಕೊಳ್ಳಲಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಹೇಳಿದ್ದಾರೆ.
ಕರ್ನಾಟಕ ಹೈಕೋರ್ಟ್ ಮೌಖಿಕವಾಗಿ ನೀಡಿರುವ ಮಧ್ಯಂತರ ತಡೆ ಆದೇಶವನ್ನು ಪ್ರಶ್ನಿಸಿ ಹಿಜಾಬ್ ಧರಿಸುವ ಧಾರ್ಮಿಕ ಹಕ್ಕಿಗಾಗಿ ಹೋರಾಡುತ್ತಿರುವ ವಿದ್ಯಾರ್ಥಿನಿಯೊಬ್ಬರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಶಾಲಾ-ಕಾಲೇಜುಗಳನ್ನು ಮತ್ತೆ ತೆರೆಯಬಹುದು. ಆದರೆ ವಿದ್ಯಾರ್ಥಿಗಳು ಧಾರ್ಮಿಕ ಉಡುಪುಗಳನ್ನು ವಿಚಾರಣೆ ಮುಗಿಯುವವರೆಗೂ ಧರಿಸುವಂತಿಲ್ಲ ಎಂಬ ಕರ್ನಾಟಕ ಹೈಕೋರ್ಟ್ ಸೂಚನೆಯು ಭಾರತೀಯ ಸಂವಿಧಾನದ 14, 15, 19, 21 ಮತ್ತು 25ನೇ ವಿಧಿಯನ್ನು ಉಲ್ಲಂಘಿಸುತ್ತದೆ ಎಂದು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾದ ವಿಶೇಷ ರಜೆ ಅರ್ಜಿಯಲ್ಲಿ ತಿಳಿಸಲಾಗಿದೆ.
PublicNext
11/02/2022 12:59 pm