ಲಕ್ನೋ: ಸ್ನೇಹಿತರನ್ನ ಹತ್ತಿಸಿಕೊಳ್ಳಲು ಕಾರು ಸೈಡ್ ತೆಗೆದುಕೊಂಡ ವ್ಯಕ್ತಿಯೊಬ್ಬರಿಗೆ ಟೋಯಿಂಗ್ ಸಿಬ್ಬಂದಿ ಶಾಕ್ ಕೊಟ್ಟ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ.
ಡ್ರೈವಿಂಗ್ ಸೀಟಿನಲ್ಲಿ ಚಾಲಕ ಕುಳಿತಿದ್ದರೂ ಟ್ರೋವಿಂಗ್ ಸಿಬ್ಬಂದಿ ಕಾರನ್ನು ಎಳೆದುಕೊಂಡು ಹೋಗಿದ್ದಾರೆ. ಲಕ್ನೋದ ಹಜರತ್‌ಗಂಜ್‌ನಲ್ಲಿ ಶನಿವಾರ ಈ ಘಟನೆ ನಡೆದಿದ್ದು, ಕ್ರೇನ್ ಲಕ್ನೋ ಮುನ್ಸಿಪಲ್ ಕಾರ್ಪೊರೇಷನ್‌ಗೆ ಸೇರಿದೆ. ಈ ದೃಶ್ಯವನ್ನು ಸ್ಥಳದಲ್ಲಿದ್ದ ವ್ಯಕ್ತಿಯೊಬ್ಬರು ತಮ್ಮ ಕ್ಯಾಮೆರಾದಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಈ ವಿಡಿಯೋ ಸದ್ಯ ವೈರಲ್ ಆಗಿದ್ದು, ಟೋಯಿಂಗ್ ಸಿಬ್ಬಂದಿ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗಿದೆ.
PublicNext
13/02/2022 09:23 pm