ಬೆಂಗಳೂರು: ರಾಜ್ಯದಲ್ಲಿ ಭುಗಿಲೆದ್ದಿರುವ ಹಿಜಾಬ್- ಕೇಸರಿ ಶಾಲು ವಿವಾದ ಕುರಿತಂತೆ ಹೈಕೋರ್ಟ್ ತ್ರಿಸದಸ್ಯ ಪೀಠವು ಇಂದು ವಿಚಾರಣೆ ಕೈಗೆತ್ತಿಕೊಂಡಿತ್ತು. ಸುದೀರ್ಘ ವಿಚಾರಣೆ ಬಳಿಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ಅವರ ನೇತೃತ್ವದ ಪೀಠವು, ನಾಳೆ (ಮಂಗಳವಾರ) ಮಧ್ಯಾಹ್ನ 2:30ಕ್ಕೆ ವಿಚಾರಣೆ ಮುಂದೂಡಿದೆ.
ವಕೀಲರಾದ ದೇವದತ್ ಕಾಮತ್ ಅವರು ಇಂದು ಕೂಡ ಹಿಜಾಬ್ ಪರವಾಗಿ ತಮ್ಮ ವಾದ ಮಂಡಿಸಿದ್ದಾರೆ. ಇನ್ನು, ಸುದೀರ್ಘ ವಿಚಾರಣೆ ನಡೆಸಿದ ಸಿಜೆ ರಿತುರಾಜ್ ಅವಸ್ತಿ, ನ್ಯಾ. ಕೃಷ್ಣ ಎಸ್ ದೀಕ್ಷಿತ್, ನ್ಯಾ. ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ ನೇತೃತ್ವದ ತ್ರಿಸದಸ್ಯ ಪೀಠ ಈಗ ಮತ್ತೆ ಕೇಸ್ ಮುಂದೂಡಿದೆ. ಮತ್ತೆ ಹಿಜಾಬ್ ಕೇಸ್ ನಾಳೆಗೆ ಮುಂದೂಡಿ ಆದೇಶಿಸಿದೆ. ಅಲ್ಲದೇ ಯಾವುದೇ ಕಾರಣಕ್ಕೂ ಕೇಸ್ ಇತ್ಯರ್ಥ ಆಗೋವರೆಗೂ ಯಾರು ಧಾರ್ಮಿಕ ಗುರುತು ಬಳಸುವಂತಿಲ್ಲ ಎಂದು ಪುನರುಚ್ಚರಿಸಿದೆ.
PublicNext
14/02/2022 04:47 pm