ಬೆಂಗಳೂರು: ರಾಜ್ಯದಲ್ಲಿ ಎಲ್ಲ ಬಗೆಯ ಆನ್‌ಲೈನ್ ಗೇಮ್ಸ್, ಬೆಟ್ಟಿಂಗ್ ನಿಷೇಧಿಸಿ ಕರ್ನಾಟಕ ಸರ್ಕಾರವು ಹೊರ ತಂದಿದ್ದ ಕರ್ನಾಟಕ ಪೊಲೀಸ್ ಕಾಯ್ದೆಗೆ ಮಾಡಿದ್ದ ತಿದ್ದುಪಡಿಯನ್ನು ಹೈಕೋರ್ಟ್ ಸೋಮವಾರ ರದ್ದುಪಡಿಸಿದೆ.
ಕರ್ನಾಟಕ ಪೊಲೀಸ್ ಕಾಯ್ದೆಗೆ ತಿದ್ದುಪಡಿ ತಂದು ಆನ್‌ಲೈನ್ ಜೂಜಾಟವನ್ನು ರಾಜ್ಯ ಸರ್ಕಾರ ನಿಷೇಧಿಸಿತ್ತು. ಇದನ್ನು ಪ್ರಶ್ನಿಸಿ ಆನ್‌ಲೈನ್ ಗೇಮಿಂಗ್ ಕಂಪನಿಗಳು ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಸುದೀರ್ಘ ವಾದ-ಪ್ರತಿವಾದ ಆಲಿಸಿದ್ದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುತಾರಾಜ್ ಅವಸ್ಥಿ ಮತ್ತು ನ್ಯಾ. ಕೃಷ್ಣ ಎಸ್. ದೀಕ್ಷಿತ್ ಅವರ ಪೀಠ 2021ರ ಡಿ. 22ರಂದು ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿತ್ತು. ಇಂದು (ಸೋಮವಾರ) ತೀರ್ಪು ಪ್ರಕಟಿಸಿದೆ.
ಸದ್ಯಕ್ಕೆ ಸರ್ಕಾರ ಆನ್‌ಲೈನ್ ಗೇಮ್ಸ್ ಕಂಪನಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಬಾರದು. ಅವುಗಳ ಚಟುವಟಿಕೆಗಳಲ್ಲಿ ಹಸ್ತಕ್ಷೇಪ ಮಾಡಬಾರದು ಎಂದು ಮಹತ್ವದ ಆದೇಶ ನೀಡಿದೆ. ಇದರಿಂದಾಗಿ ರಾಜ್ಯ ಸರಕಾರಕ್ಕೆ ಭಾರಿ ಹಿನ್ನೆಡೆಯಾಗಿದೆ.
ಆಲ್ ಇಂಡಿಯಾ ಗೇಮಿಂಗ್ ಫೆಡರೇಷನ್ ಮತ್ತಿತರ ಕಂಪನಿಗಳು ಕರ್ನಾಟಕ ಪೊಲೀಸ್ ತಿದ್ದುಪಡಿ ಕಾಯಿದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ನೇತೃತ್ವದ ವಿಶೇಷ ವಿಭಾಗೀಯ ಪೀಠ ಸೋಮವಾರ ತೀರ್ಪು ಪ್ರಕಟಿಸಿತು.
PublicNext
14/02/2022 06:05 pm