ಬೆಂಗಳೂರು: ಹಿಜಾಬ್ ವಿವಾದ ಕುರಿತಂತೆ ಹೈಕೋರ್ಟ್ ತ್ರಿಸದಸ್ಯ ಪೀಠವು ವಿಚಾರಣೆ ನಡೆಸುತ್ತಿದೆ. ಈ ಮಧ್ಯೆ ಉಡುಪಿ ವಿದ್ಯಾರ್ಥಿನಿಯರು, ಹಿಜಾಬ್ ಪ್ರಕರಣದ ವಿಚಾರಣೆಯನ್ನು ಮುಂದೂಡುವಂತೆ ಮಧ್ಯಂತರ ಅರ್ಜಿಯನ್ನು ಸಲ್ಲಿಸಿತ್ತು. ಆದರೆ ಈ ಅರ್ಜಿಯನ್ನು ಹೈಕೋರ್ಟ್‌ನ ತ್ರಿಸದಸ್ಯ ಪೀಠವು ತಿರಸ್ಕರಿಸಿದೆ.
ಅರ್ಜಿಯಲ್ಲಿ ಏನಿತ್ತು?:
ಹಿಜಾಬ್ ಪ್ರಕರಣವು ಪಂಚರಾಜ್ಯಗಳ ಚುನಾವಣೆ ಮೇಲೆ ಪ್ರಭಾವ ಬೀರುತ್ತದೆ ಎಂದು ಉಡುಪಿ ವಿದ್ಯಾರ್ಥಿನಿಯರು ನಿನ್ನೆ (ಮಂಗಳವಾರ) ಹೈಕೋರ್ಟ್‌ಗೆ ವಿಚಾರಣೆ ಮುಂದೂಡುವಂತೆ ಅರ್ಜಿ ಸಲ್ಲಿಸಿದ್ದರು. ಸದ್ಯ ಅರ್ಜಿಯ ವಿಚಾರಣೆ ನಡೆಸಿದ ತ್ರಿಸದಸ್ಯ ಪೀಠವು ವಿದ್ಯಾರ್ಥಿನಿಯರ ಅರ್ಜಿಯನ್ನು ತಿರಸ್ಕೃತಗೊಳಿಸಿ ಆದೇಶಿಸಿದೆ.
PublicNext
15/02/2022 05:45 pm