ಬೆಂಗಳೂರು: ರಾಜ್ಯಲ್ಲಿ ಆತಂಕದ ವಾತಾವರಣ ಸೃಷ್ಟಿಸಿದ್ದ ಹಿಜಾಬ್ ವಿವಾದ ಸಂಬಂಧಿಸಿದ ಅರ್ಜಿ ವಿಚಾರಣೆಯ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.
ಕರ್ನಾಟಕ ಹೈಕೋರ್ಟ್ನ ತ್ರಿಸದಸ್ಯ ಪೀಠವು ಹಿಜಾಬ್ ಪ್ರಕರಣದ ಸಂಬಂಧ ಇಂದು (ಗುರುವಾರ) ನಾಲ್ಕನೇ ದಿನದ ವಿಚಾರಣೆ ಆರಂಭಿಸಿದೆ. ನಿನ್ನೆ (ಬುಧವಾರ) ಸಹ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರಾದ ದೇವದತ್ ಕಾಮತ್ ತಮ್ಮ ವಾದ ಮಂಡಿಸಿದರು. ದೇಶ-ವಿದೇಶಗಳ ಕೋರ್ಟ್ ತೀರ್ಪುಗಳನ್ನು ಉಲ್ಲೇಖಿಸಿ ಕಾಮತ್ ವಾದ ಮಂಡಿಸಿದ್ದರು. ಸುದೀರ್ಘ ವಿಚಾರಣೆ ನಡೆಸಿದ ಮುಖ್ಯ ನ್ಯಾಯಾಧೀಶರಾದ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್, ನ್ಯಾ. ಖಾಜಿ ಜೇಬುನ್ನೀಸಾ ಮೊಹಿಯುದ್ದೀನ್ ನೇತೃತ್ವದ ತ್ರಿಸದಸ್ಯವು ಪೀಠವು ಮತ್ತೆ ಪ್ರಕರಣದ ವಿಚಾರಣೆಯನ್ನು ಇಂದಿಗೆ (ಗುರುವಾರ) ಮಧ್ಯಾಹ್ನ 2:30ಕ್ಕೆ ವಿಚಾರಣೆಯನ್ನು ಮುಂದೂಡಲಾಗಿತ್ತು. ಅದರಂತೆ ಇಂದು ವಿಚಾರಣೆ ಆರಂಭವಾಗಿದೆ.
PublicNext
17/02/2022 02:45 pm