ಬೆಂಗಳೂರು: ಹಿಜಾಬ್ ವಿವಾದ ಕುರಿತಂತೆ ನಾಲ್ಕನೇ ದಿನವಾದ ಇಂದು ಕೂಡ ವಿಚಾರಣೆ ನಡೆಸಿದ ಹೈಕೋರ್ಟ್ ತ್ರಿಸದಸ್ಯ ಪೀಠವು ಮತ್ತೆ ನಾಳೆ (ಫೆ.18, ಶುಕ್ರವಾರ) 2:30ಕ್ಕೆ ಮುಂದೂಡಿದೆ.
ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಮತ್ತು ನ್ಯಾಯಮೂರ್ತಿ ಜೆ.ಎಂ. ಖಾಜಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ಇಂದು ವಿಚಾರಣೆ ನಡೆಸಿತು. ಆದರೆ ತ್ರಿಸದಸ್ಯ ಪೀಠವು ವಿಚಾರಣೆಯನ್ನು ನಾಳೆಗೆ ಮುಂದೂಡಿದೆ. ಹೀಗಾಗಿ ನಾಳೆ ರಾಜ್ಯ ಸರ್ಕಾರದ ಪರ ವಕೀಲರು ವಾದ ಮಂಡನೆ ಮಾಡಲಿದ್ದಾರೆ.
PublicNext
17/02/2022 03:51 pm