ಬೆಂಗಳೂರು: ರಾಜ್ಯದಲ್ಲಿ ಆತಂಕದ ವಾತಾವರಣ ಸೃಷ್ಟಿಸಿದ್ದ ಹಿಜಾಬ್ ವಿವಾದ ಸಂಬಂಧಿಸಿದ ಅರ್ಜಿ ವಿಚಾರಣೆಯು ಇಂದು ಮತ್ತೆ ಆರಂಭವಾಗಿದೆ.
ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಮತ್ತು ನ್ಯಾಯಮೂರ್ತಿ ಜೆ.ಎಂ. ಖಾಜಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ನಿನ್ನೆ (ಗುರುವಾರ) ವಿಚಾರಣೆ ನಡೆಸಿತ್ತು. ಆದರೆ ತ್ರಿಸದಸ್ಯ ಪೀಠವು ವಿಚಾರಣೆಯನ್ನು ಮತ್ತೆ ಇಂದು ಮಧ್ಯಾಹ್ನ 2:30ಕ್ಕೆ ಮುಂದೂಡಿತ್ತು. ಹೀಗಾಗಿ ಇಂದು ರಾಜ್ಯ ಸರ್ಕಾರದ ಪರ ವಕೀಲರು ವಾದ ಮಂಡನೆ ಮಾಡಲಿದ್ದಾರೆ.
PublicNext
18/02/2022 02:40 pm