ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಕೊಡಗು ಮೂಲದ ಯೋಧ ಅಲ್ತಾಫ್ ಅಹ್ಮದ್ (37) ಹುತಾತ್ಮರಾಗಿದ್ದಾರೆ ಎಂದು ರಕ್ಷಣಾ ಇಲಾಖೆ ಕುಟುಂಬಕ್ಕೆ ಮಾಹಿತಿ ನೀಡಿದೆ.
ಯೋಧ ಅಲ್ತಾಫ್ ಅಹ್ಮದ್ ಹಿಮಪಾತಕ್ಕೆ ಸಿಲುಕಿ ಮೃತಪಟ್ಟಿರುವುದಾಗಿ ಕುಟುಂಬಸ್ಥರು ಹೇಳಿಕೆ ನೀಡಿದ್ದಾರೆ. ಎಒಸಿ ರೆಜಿಮೆಂಟ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಲ್ತಾಫ್ ಸಾವನ್ನಪ್ಪಿದ್ದಾರೆ. ಸದ್ಯ ಯೋಧನ ಕುಟುಂಬ ಕೇರಳದ ಮಟ್ಟನೂರು ಜಿಲ್ಲೆಯಲ್ಲಿ ನೆಲೆಸಿದೆ.
ವಿರಾಜಪೇಟೆಯ ಮೀನುಪೇಟೆಯಲ್ಲಿ ಹುಟ್ಟಿ ಬೆಳೆದಿದ್ದ ಅಲ್ತಾಫ್ ಕುಟುಂಬ ಕಳೆದ 10 ವರ್ಷಗಳಿಂದ ಕೇರಳಕ್ಕೆ ಶಿಫ್ಟ್ ಆಗಿತ್ತು ಎಂದು ತಿಳಿದುಬಂದಿದೆ. ದ್ವಿತೀಯ ಪಿಯುಸಿವರೆಗೂ ವಿರಾಜಪೇಟೆಯಲ್ಲಿ ವಿದ್ಯಾಭ್ಯಾಸ ನಡೆಸಿದ್ದ ಅಲ್ತಾಫ್, ಪಿಯುಸಿ ಬಳಿಕ ಆರ್ಮಿ ಸೇರಿದ್ದರು. ಅಪಾರ ದೇಶಭಕ್ತನಾಗಿದ್ದ ಅಲ್ತಾಫ್, 19 ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸಿದ್ದರು. ಶ್ರೀನಗರದಲ್ಲಿ ಕರ್ತವ್ಯದಲ್ಲಿದ್ದ ಯೋಧ ಅಲ್ತಾಫ್ ಹುತಾತ್ಮರಾಗಿದ್ದಾರೆ.
PublicNext
24/02/2022 08:16 am