ಬೆಂಗಳೂರು: ಇನ್ಮುಂದೆ ಪದವಿ ಶಿಕ್ಷಣದಲ್ಲಿ ಕನ್ನಡ ಸೇರಿದಂತೆ ಯಾವುದೇ ಭಾಷೆ ಕಡ್ಡಾಯವಲ್ಲ ಅಂತಲೇ ಕೇಂದ್ರ ಸರ್ಕಾರ ಹೇಳಿದೆ. ಈ ಕುರಿತು ಕರ್ನಾಟಕ ಹೈಕೋರ್ಟ್ ಗೆ ಪ್ರಮಾಣ ಪತ್ರವನ್ನೂ ಸಲ್ಲಿಸಿದೆ.
ರಾಷ್ಟ್ರೀಯ ಶಿಕ್ಷಣ ನೀತಿ-2020 (NEP) ನಿಯಮಗಳಲ್ಲಿ ಕನ್ನಡ ಸೇರಿದಂತೆ ಯಾವುದೇ ಭಾಷೆ ಕಡ್ಡಾಯಗೊಳಿಸುವ ಉಲ್ಲೇಖಗಳೇ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ಪದವಿ ಹಂತದಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯಗೊಳಿಸಿರೋ ರಾಜ್ಯ ಸರ್ಕಾರಕ್ಕೆ ಇದರಿಂದ ಈಗ ಹಿನ್ನೆಡೆ ಆಗಿದೆ.
PublicNext
09/03/2022 09:48 am