ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಿಜಾಬ್ ವಿವಾದ : ಇಂದು ಐತಿಹಾಸಿಕ ತೀರ್ಪು ಪ್ರಕಟಿಸಲಿರುವ ಹೈಕೋರ್ಟ್

ಬೆಂಗಳೂರು : ರಾಜ್ಯದಲ್ಲಿ ಕಿಚ್ಚು ಹಚ್ಚಿದ ಸಮವಸ್ತ್ರದ ಸಮರಕ್ಕೆ ಇಂದು ರಾಜ್ಯ ಹೈಕೋರ್ಟ್ ನಿಂದ ಮಹತ್ವದ ತೀರ್ಪು ಹೊರಬೀಳಲಿದೆ.

ಇದೊಂದು ಸೂಕ್ಷ್ಮ ಪ್ರಕರಣವಾಗಿದ್ದರಿಂದ ಬೆಂಗಳೂರು ನಗರದಾದ್ಯಂತ ಖಾಕಿ ಕಟ್ಟೆಚ್ಚರ ವಹಿಸಲಾಗಿದೆ. ನಗರದಾದ್ಯಂತ 10 ಸಾವಿರಕ್ಕೂ ಅಧಿಕ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

ಇಬ್ಬರು ಹೆಚ್ಚುವರಿ ಪೊಲೀಸ್ ಆಯುಕ್ತರು, 8 ಡಿಸಿಪಿ, 40 ಎಸಿಪಿ, 120 ಇನ್ಸ್ ಪೆಕ್ಟರ್ ಗಳ ಜೊತೆ 40 ಸಿಎಆರ್, 30 ಕೆಎಸ್ ಆರ್ ಪಿ ತುಕಡಿ ಬಂದೋಬಸ್ತ್ ಗೆ ನಿಯೋಜಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ನಗರದಾದ್ಯಂತ ಸೆಕ್ಷನ್ 144 ಜಾರಿ ಮಾಡಲಾಗಿದೆ. ಸೋಶಿಯಲ್ ಮೀಡಿಯಾ ಮೇಲೆ ಖಾಕಿ ಹದ್ದಿನ ಕಣ್ಣು ಇರಿಸಲಾಗಿದೆ. ನಗರದ ಶಾಲಾ ಕಾಲೇಜುಗಳ ಹೆಚ್ಚಿನ ನಿಗಾ ವಹಿಸುವಂತೆ ಪೊಲೀಸ್ ಆಯುಕ್ತರು ಸೂಚನೆ ನೀಡಿದ್ದಾರೆ.

ಇಂದು 10.30ಕ್ಕೆ ತೀರ್ಪು ಪ್ರಕಟ

ಬೆಳಗ್ಗೆ 10.30ಕ್ಕೆ ಹಿಜಾಬ್ ವಿವಾದದ ಕುರಿತು ತೀರ್ಪು ಪ್ರಕಟಿಸುವುದಾಗಿ ಕರ್ನಾಟಕ ಹೈಕೋರ್ಟ್ ತಿಳಿಸಿದೆ. ಸಮವಸ್ತ್ರದ ಜತೆ ಹಿಜಾಬ್ ಗೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ತೀರ್ಪು ಹೊರ ಬೀಳಲಿದೆ. ಸಿಜೆ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್, ನ್ಯಾ.ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ ಅವರ ಪೂರ್ಣ ಪೀಠ ತೀರ್ಪು ನೀಡಲಿದೆ.

Edited By : Nirmala Aralikatti
PublicNext

PublicNext

15/03/2022 07:35 am

Cinque Terre

61.72 K

Cinque Terre

3

ಸಂಬಂಧಿತ ಸುದ್ದಿ