ನವದೆಹಲಿ: ಕೋವಿಡ್ ನಿರ್ಬಂಧಗಳನ್ನು ಉಲ್ಲಂಘಿಸಿ ತಬ್ಲಿಘಿ ಜಮಾತ್ ಕಾರ್ಯಕ್ರಮ ನಡೆಸಿತ್ತು ಎಂಬ ಆರೋಪದ ಮೇರೆಗೆ ಕಳೆದ 2 ವರ್ಷಗಳಿಂದ ಬಂದ್ ಆಗಿದ್ದ ದೆಹಲಿಯ ನಿಜಾಮುದ್ದೀನ್ ಮರ್ಕಜ್ ಮಸೀದಿ ಗುರುವಾರ ಪುನರಾರಂಭವಾಗಿದೆ.
ಶಬ್-ಇ-ಬರಾತ್ ಹಿನ್ನೆಲೆಯಲ್ಲಿ ಭಕ್ತರ ಪ್ರಾರ್ಥನೆಗೆ ಅವಕಾಶ ಮಾಡಿಕೊಡಲು ದೆಹಲಿ ಹೈಕೋರ್ಟ್ ಮಸೀದಿ ಪುನರಾರಂಭಕ್ಕೆ ಬುಧವಾರ ಹಸಿರು ನಿಶಾನೆ ತೋರಿತ್ತು. ಹೀಗಾಗಿ ಗುರುವಾರ ಮಧ್ಯಾಹ್ನ 12:30ರ ವೇಳೆಗೆ ಮಸೀದಿಯನ್ನು ತೆರೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
PublicNext
17/03/2022 07:34 pm