ಬೆಂಗಳೂರು: ವಿವಾಹ ವಿಚ್ಛೇದನಕ್ಕೆ ಮನಸ್ತಾಪ, ಪ್ರತ್ಯೇಕ ವಾಸ ಆಧಾರವಲ್ಲ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.
ವಿವಾಹ ವಿಚ್ಛೇದನಕ್ಕೆ ಡಿಕ್ರಿ (ಆದೇಶ) ನೀಡಿದ್ದ ಬೆಂಗಳೂರಿನ ನಾಲ್ಕನೇ ಹೆಚ್ಚುವರಿ ಕೌಟುಂಬಿಕ ನ್ಯಾಯಾಲಯದ ಕ್ರಮವನ್ನು ಹೈಕೋರ್ಟ್ ರದ್ದುಪಡಿಸಿದೆ. ಪತಿಯ ವಿವಾಹ ವಿಚ್ಛೇದನ ಮನವಿಯನ್ನು ಮಾನ್ಯ ಮಾಡಿದ್ದ ಕೌಟುಂಬಿಕ ನ್ಯಾಯಾಲಯದ ಕ್ರಮವನ್ನು ಪ್ರಶ್ನಿಸಿ ಪತ್ನಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಆಲೋಕ್ ಆರಾಧೆ ಮತ್ತು ನ್ಯಾ. ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿದೆ.
'ಅರ್ಜಿದಾರ ದಂಪತಿಯ ನಡುವೆ ಸರಿಪಡಿಸಲಾಗದಂತಹ ಕಂದಕವಿದೆ. ಒಂಬತ್ತು ವರ್ಷಗಳಿಂದ ಅವರು ಪ್ರತ್ಯೇಕವಾಗಿ ವಾಸ ಮಾಡುತ್ತಿದ್ದಾರೆ. ಹಾಗಾಗಿ ಇದು ವಿವಾಹ ವಿಚ್ಛೇದನಕ್ಕೆ ಅರ್ಹವಾಗಿದೆ ಎಂಬ ಅಭಿಪ್ರಾಯದೊಂದಿಗೆ ಕೌಟುಂಬಿಕ ನ್ಯಾಯಾಲಯ ವಿಚ್ಛೇದ ನದ ಡಿಕ್ರಿ ನೀಡಿರುವುದು ಸರಿಯಲ್ಲ. ಪತಿ-ಪತ್ನಿಯರ ಆರೋಪಗಳನ್ನು ಆಯಾ ಸಮಾಜದ ರೀತಿ ರಿವಾಜುಗಳ ನಿರ್ದಿಷ್ಟ ತಳಹದಿಯಲ್ಲಿ ಗಮನಿಸಬೇಕಾಗುತ್ತದೆ' ಎಂದು ನ್ಯಾಯಪೀಠ ಹೇಳಿದೆ.
PublicNext
27/03/2022 05:24 pm