ಬೆಂಗಳೂರು: ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ನನವರ್ ವಿರುದ್ಧ ವಕೀಲ ಕೆ.ಎನ್.ಜಗದೀಶ್ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ರವಿ.ಡಿ.ಚನ್ನಣ್ಣವರ್ ವಿರುದ್ಧ ರಾಜ್ಯ ಸರ್ಕಾರ ತನಿಖೆ ನಡೆಸಲು ಹಿಂದೇಟು ಹಾಕುತ್ತಿದೆ. ಈ ಹಿನ್ನೆಲೆಯಲ್ಲಿ ಸಿಬಿಐ, ಇಡಿಯಿಂದ ತನಿಖೆ ನಡೆಸುವಂತೆ ವಕೀಲ ಕೆ.ಎನ್.ಜಗದೀಶ್ ಮನವಿ ಮಾಡಿದ್ದಾರೆ. ರವಿ ಡಿ.ಚನ್ನಣ್ಣವರ್ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ, ಪೋಷಕರ ಹೆಸರಲ್ಲೂ ಅಪಾರ ಆಸ್ತಿ ಖರೀದಿ ಸೇರಿದಂತೆ ಹಲವು ಆರೋಪಗಳು ಕೇಳಿಬಂದಿವೆ. ಈ ನಿಟ್ಟಿನಲ್ಲಿ ತನಿಖೆಗೆ ಆದೇಶಿಸುವಂತೆ ಅರ್ಜಿಯಲ್ಲಿ ಮನವಿ ಮಾಡಲಾಗಿದೆ.
PublicNext
29/03/2022 11:42 am