ಬೆಂಗಳೂರು: ನಾನ್ ಕಾಗ್ನಿಸಿಬಲ್ (ಉದ್ದೇಶವಲ್ಲದ) ಅಪರಾಧ ಪ್ರಕರಣದಲ್ಲಿ ಮ್ಯಾಜಿಸ್ಟ್ರೇಟ್ ಆದೇಶವಿಲ್ಲದೆ ಎಫ್‌ಐಆರ್ ದಾಖಲಿಸಿ ತನಿಖೆ ಮಾಡೋವಂತಿಲ್ಲ. ಮ್ಯಾಜಿಸ್ಟ್ರೇಟ್ ಅನುಮತಿಯು ತನಿಖೆಗೆ ಆದೇಶ ಎನಿಸಿಕೊಳ್ಳುವುದಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
ತಮ್ಮ ವಿರುದ್ಧ ಪೊಲೀಸರು ದಾಖಲಿಸಿ ಎಫ್‌ಐಆರ್ ಹಾಗೂ ಮ್ಯಾಜಿಸ್ಟ್ರೇಟ್‌ಗೆ ಸಲ್ಲಿಸಿದ ದೋಷಾರೋಪಟ್ಟಿಯನ್ನ ರದ್ದುಗೊಳಿಸಿ ಎಂದು ಬೆಂಗಳೂರಿನ ಹರಿರಾಜ್ ಶೆಟ್ಟಿ ಅರ್ಜಿ ಸಲ್ಲಿಸಿದ್ದರು.
ಹರಿರಾಜ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನ ವಿಚಾರಣೆಯನ್ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ಈಗ ಈ ತೀರ್ಪು ನೀಡಿದೆ.
PublicNext
07/04/2022 08:00 am