ಬೆಂಗಳೂರು: ಪದವಿಯಲ್ಲಿ ಕಡ್ಡಾಯವಾಗಿ ಕನ್ನಡವನ್ನ ಒಂದು ಭಾಷೆಯಾಗಿ ಕಲಿಯಲೇಬೇಕು ಎಂದು ರಾಜ್ಯ ಸರ್ಕಾರ ಆದೇಶ ನೀಡಿತ್ತು. ಆದರೆ, ಹೈಕೋರ್ಟ್ ಈಗ ಈ ಆದೇಶಕ್ಕೆ ತಡೆ ನೀಡಿದೆ.
ಸರ್ಕಾರದ ಈ ಆದೇಶದ ರದ್ದು ಕೋರಿ ಕರ್ನಾಟಕದ ಸಂಸ್ಕೃತ ಭಾರತಿ ಟ್ರಸ್ಟ್ ಪ್ರಾಧ್ಯಾಮಪಕ ಸಂಘ ಮತ್ತು ಕೆಲವು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಈಗ ಕನ್ನಡ ಕಲಿಕೆ ಕಡ್ಡಾಯ ಆದೇಶಕ್ಕೆ ತಡೆ ನೀಡಿದೆ.
ಕೇಂದ್ರ ಸರ್ಕಾರದ ನೂತರ ಶಿಕ್ಷಣ ನೀತಿಯಲ್ಲಿ ಪ್ರಾದೇಶಿಕ ಭಾಷೆಯ ಕಲಿಕೆಯನ್ನ ಕಡ್ಡಾಯಗೊಳಿಸಿಯೇ ಇಲ್ಲ. ಇದರ ಆಧಾರದ ಮೇಲೆನೆ ಹೈಕೊರ್ಟ್ ಪೀಠದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ,ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಈ ತಡೆ ನೀಡಿದ್ದಾರೆ.
PublicNext
07/04/2022 11:01 am