ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆಯೋ ಕಾಮಗಾರಿಯ ಬಿಲ್ ಪಾವತಿ ವಿಷಯಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಈಗ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಿಡಿಸಿದೆ.
ಬಿಲ್ ಪಾವತಿ ವಿಳಂಬಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರರಾದ ಬಿ.ಬಿ.ಉಮೇಶ್ ಸೇರಿದಂತೆ ಹಲವರು ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರ ಏಕಸದಸ್ಯರ ಪೀಠ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.
ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ ನ್ಯಾಯ ಪೀಠ, ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಯ್ನನೂ ಪ್ರಸ್ತಾಪಿಸಿದೆ. ಇನ್ನೂ ಎಷ್ಟು ಜನರನ್ನ ಸಾಯಿಸಬೇಕು ಎಂದಿದ್ದೀರಿ ಅಂತಲೂ ಪೀಠ ಕೇಳಿದೆ.
PublicNext
20/04/2022 06:30 pm