ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಿಎಸ್ಐ ನೇಮಕಾತಿ ಅಕ್ರಮ ಕೇಸ್: ಪ್ರಿಯಾಂಕ್ ಖರ್ಗೆಗೆ ಸಿಐಡಿ ನೋಟಿಸ್

ಬೆಂಗಳೂರು: ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿದ್ದ ಮತ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಆಡಿಯೋವೊಂದನ್ನು ಬಿಡುಗಡೆ ಮಾಡಿದ್ದ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಈಗ ಸಿಐಡಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

ಪೊಲೀಸರು ಪ್ರಿಯಾಂಕ್ ಖರ್ಗೆ ಅವರಿಗೆ ನೀಡಿದ ನೋಟೀಸ್‌ನಲ್ಲಿ, 545 ಪಿಎಸ್ಐ (ಸಿವಿಲ್) ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕಲಬುರಗಿ ನಗರ ಚೌಕ್ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದ್ದು, ಸಿಐಡಿ ಬೆಂಗಳೂರಿನಲ್ಲಿ ತನಿಖೆ ಜಾರಿಯಲ್ಲಿರುತ್ತದೆ. ಪಿಎಸ್ಐ ಹುದ್ದೆಗಳ ನೇಮಕಾತಿ ಅಕ್ರಮಗಳು ನಡೆದಿವೆ ಎಂಬುದಕ್ಕೆ ತಮ್ಮ ಬಳಿ ಸಾಕ್ಷ್ಯಾಧಾರಗಳಿರುವುದಾಗಿ ಮಾಧ್ಯಮಕ್ಕೆ ಮಾಹಿತಿ ನೀಡಿರುತ್ತೀರಿ. ಈ ಪ್ರಕರಣವು ಸೂಕ್ಷ್ಮ ತುಂಬಾ ಗಂಭೀರ ಪ್ರಕರಣವಾಗಿರುವುದರಿಂದ ಲಭ್ಯವಿರುವ ಎಲ್ಲ ಸಾಕ್ಷ್ಯಗಳನ್ನು ಸಂಗ್ರಹಿಸಿ ತ್ವರಿತಗತಿಯಲ್ಲಿ ತನಿಖೆ ಮಾಡುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಬಳಿಯಿರುವ ಮಾಹಿತಿಗಳನ್ನು ದಿನಾಂಕ 25ರಂದು ಬೆಳಗ್ಗೆ 11.30ಕ್ಕೆ ಬೆಂಗಳೂರಿನ ಸಿಐಡಿ ಕಚೇರಿಗೆ ಹಾಜರಾಗಿ ಸಾಕ್ಷಿಗಳನ್ನು ಒದಗಿಸುವಂತೆ ಈ ಮೂಲಕ ತಮಗೆ ಸೂಚಿಸಿದೆ ಎಂದು ಹೇಳಲಾಗಿದೆ.

ಇನ್ನೂ ಸಿಐಡಿ ನೋಟಿಸ್ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ ಅವರು, ಪೊಲೀಸರು ವಿಚಾರಣೆಗೆ ಬರುವಂತೆ ನೋಟಿಸ್ ನೀಡಿದ್ದಾರೆ. ಆದರೆ ವಿಚಾರಣೆಗೆ ತೆರಳುವ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಮಾಡಿಲ್ಲ. ಈ ಬಗ್ಗೆ ಪಕ್ಷದ ತೀರ್ಮಾನದಂತೆ ನಡೆದುಕೊಳ್ಳುವುದಾಗಿ ತಿಳಿಸಿದ್ದಾರೆ.

Edited By : Vijay Kumar
PublicNext

PublicNext

25/04/2022 01:04 pm

Cinque Terre

25.65 K

Cinque Terre

4

ಸಂಬಂಧಿತ ಸುದ್ದಿ