ನವದೆಹಲಿ: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧಿಸುವ ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ಧ ಸಲ್ಲಿಕೆಯಾಗಿರುವ ಮೇಲ್ಮನವಿಗಳನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಮಂಗಳವಾರ ಸಮ್ಮತಿ ನೀಡಿದೆ.
ಹೌದು. ಮಂಗಳವಾರ ಸುಪ್ರೀಂಕೋರ್ಟ್ ಕಲಾಪದ ವೇಳೆ ಹಿರಿಯ ವಕೀಲೆ ಮೀನಾಕ್ಷಿ ಅರೋರ ಹಿಜಾಬ್ ವಿಚಾರದಲ್ಲಿ ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸಬೇಕು ಎಂದು ಮನವಿ ಸಲ್ಲಿಸಿದರು. ಈ ವೇಳೆ ನ್ಯಾಯಮೂರ್ತಿಗಳು ನಾವು ಅರ್ಜಿಯನ್ನು ಪರಿಗಣಿಸುತ್ತೇವೆ. ಎರಡು ದಿನ ಕಾಲ ಕಾಯುವಂತೆ ಅವರು ಹೇಳಿದ್ದಾಗಿ ವರದಿಯಾಗಿದೆ.
ಶಾಲಾ-ಕಾಲೇಜುಗಳ ಸಮವಸ್ತ್ರದ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ನಿರ್ದೇಶಿಸುವ ಕರ್ನಾಟಕ ಸರ್ಕಾರದ ಆದೇಶವನ್ನು ಈ ಹಿಂದೆ ಹೈಕೋರ್ಟ್ ಎತ್ತಿ ಹಿಡಿದಿತ್ತು. ನ್ಯಾಯಾಲಯದ ಈ ಆದೇಶದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಕೆಲವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಹಿಜಾಬ್ ಕುರಿತ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿಗಳನ್ನು ತುರ್ತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಮಾರ್ಚ್ ತಿಂಗಳಲ್ಲಿ ನಿರಾಕರಿಸಿತ್ತು.
PublicNext
26/04/2022 05:17 pm