ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಶ್ಮೀರದಲ್ಲಿ ಎನ್‌ಕೌಂಟರ್: ಹಿಜ್ಬುಲ್‌ನ ಹಿರಿಯ ಉಗ್ರ ಸೇರಿ ಮೂವರ ಹತ್ಯೆ

ಶ್ರೀನಗರ: ಭದ್ರತಾ ಪಡೆಗಳು ಶುಕ್ರವಾರ ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಹಿಜ್ಬುಲ್ ಮುಜಾಹಿದ್ದೀನ್‌ನ ಅತ್ಯಂತ ಹಳೆಯ ಭಯೋತ್ಪಾದಕರಲ್ಲಿ ಒಬ್ಬನಾದ ಅಶ್ರಫ್ ಮೋಲ್ವಿ ಮತ್ತು ಇತರ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಮರನಾಥ ಯಾತ್ರೆಯ ಮಾರ್ಗದ ಬಳಿ ಎನ್‌ಕೌಂಟರ್ ನಡೆದಿದೆ. ಅಶ್ರಫ್ ವಾಂಟೆಡ್ ಉಗ್ರರ ಪಟ್ಟಿಗೆ ಸೇರಿದ್ದು, 2013ರಿಂದ ಕಾಶ್ಮೀರದಲ್ಲಿ ಸಕ್ರಿಯನಾಗಿದ್ದ.

ಪಹಲ್ಗಾಮ್‌ನ ಅರಣ್ಯ ಒಂದರಲ್ಲಿ ಉಗ್ರರು ಅಡಗಿರುವ ಬಗ್ಗೆ ನಿರ್ದಿಷ್ಟ ಮಾಹಿತಿ ಬಂದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು, ಸಂಪೂರ್ಣ ಪ್ರದೇಶವನ್ನು ಬಂದ್ ಮಾಡಿ ಪತ್ತೆ ಕಾರ್ಯಾಚರಣೆ ಆರಂಭಿಸಿದ್ದರು. ಉಗ್ರರ ಹುಡುಕಾಟದ ವೇಲೆ ಅವರ ಕಡೆಯಿಂದ ಗುಂಡಿನ ದಾಳಿ ಆರಂಭವಾಗಿತ್ತು. ಅಡಗಿಕೊಂಡಿದ್ದ ಉಗ್ರರ ಮೇಲೆ ಪ್ರತಿಯಾಗಿ ಭದ್ರತಾ ಪಡೆಗಳು ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಮೂವರು ಉಗ್ರರು ಹತರಾಗಿದ್ದಾರೆ.

ದಕ್ಷಿಣ ಕಾಶ್ಮೀರದ ಪ್ರಮುಖ ಪ್ರವಾಸಿ ತಾಣವಾಗಿರುವ ಪಹಲ್ಗಾಮ್, ಅಮರನಾಥ ಯಾತ್ರೆಯ ಬೇಸ್ ಕ್ಯಾಂಪ್‌ಗಳಲ್ಲಿ ಒಂದಾಗಿದೆ. ಎರಡು ವರ್ಷಗಳ ತರುವಾಗ ಜೂನ್ 30ರಂದು ಅಮರನಾಥ ಯಾತ್ರೆ ಆರಂಭವಾಗಲಿದೆ ಎಂದು ನಿಗದಿ ಮಾಡಲಾಗಿದೆ.

Edited By : Vijay Kumar
PublicNext

PublicNext

06/05/2022 06:34 pm

Cinque Terre

43.81 K

Cinque Terre

5

ಸಂಬಂಧಿತ ಸುದ್ದಿ