ಶ್ರೀನಗರ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಮೂವರು ಲಷ್ಕರ್ ಉಗ್ರರನ್ನು ಪೊಲೀಸರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಶನಿವಾರ ರಾತ್ರಿ ಈ ಕಾರ್ಯಾಚರಣೆ ಆರಂಭವಾಗಿದ್ದು, ಸುಮಾರು 12 ಗಂಟೆಗಳ ಕಾಲ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಎನ್ ಕೌಂಟರ್ ನಲ್ಲಿ ಹತರಾದ ಮೂವರು ಉಗ್ರರನ್ನು ಜುನೈದ್ ಶೀರ್ಗೋಜ್ರಿ, ಫಾಜಿಲ್ ನಜೀರ್ ಭಟ್ ಮತ್ತು ಇರ್ಫಾನ್ ಅಹ್ ಮಲಿಕ್ ಎಂದು ಗುರುತಿಸಲಾಗಿದೆ.ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಡ್ರಾಬ್ಗಮ್ ಪ್ರದೇಶದಲ್ಲಿ ಈ ಎನ್ ಕೌಂಟರ್ ನಡೆದಿದೆ. ಎರಡು ಎಕೆ-47 ರೈಫಲ್ ಗಳು ಮತ್ತು ಪಿಸ್ತೂಲ್ ಸೇರಿದಂತೆ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
PublicNext
12/06/2022 10:18 am