ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಹಾರಾಷ್ಟ್ರ ರಾಜ್ಯಪಾಲರ ಸೂಚನೆ ಪ್ರಶ್ನಿಸಿದ ಅರ್ಜಿ ವಿಚಾರಣೆಗೆ ಸುಪ್ರೀಂ ಅಸ್ತು

ನವದೆಹಲಿ: ಉದ್ಧವ್ ಠಾಕ್ರೆ ಸರ್ಕಾರಕ್ಕೆ ಬಹುಮತ ಸಾಬೀತುಪಡಿಸುವಂತೆ ರಾಜ್ಯಪಾಲ ಭರತ್ ಸಿಂಗ್ ಕೋಶಿಯಾರಿ ಸೂಚಿಸಿದ್ದಾರೆ. ಆದರೆ, ಇದನ್ನ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಗೆ ಸಲ್ಲಿಸಿದ ಅರ್ಜಿಯನ್ನ ಇಂದು ಸಂಜೆ-05 ಗಂಟೆಗೆ ವಿಚಾರಣೆ ನಡೆಸೋದಾಗಿ ಸುಪ್ರೀಂ ಕೋರ್ಟ್ ಹೇಳಿದೆ.

ರಾಜ್ಯಪಾಲರ ಆದೇಶವನ್ನು ಪ್ರಶ್ನಿಸಿದ ಶಿವಸೇನಾ ಮುಖ್ಯ ಸಚೇತಕ ಸುನಿಲ್ ಪ್ರಭು,ಸುಪ್ರೀಂ ಕೋರ್ಟ್ ಅರ್ಜಿ ಸಲ್ಲಿಸಿದ್ದರು.

ಶಿವಸೇನಾ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ತುರ್ತಾಗಿಯೇ ಈ ಅರ್ಜಿ ವಿಚಾರಣೆ ನಡೆಸುವಂತೆ ಮನವಿ ಮಾಡಿಕೊಂಡಿದ್ದರು. ಇಂದು ಸಂಜೆ 5 ಗಂಟೆಗೆ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರ ನೇತೃತ್ವದ ಪೀಠ ಈ ಅರ್ಜಿ ವಿಚಾರಣೆ ಮಾಡಲಿದೆ.

Edited By :
PublicNext

PublicNext

29/06/2022 03:00 pm

Cinque Terre

36.24 K

Cinque Terre

1

ಸಂಬಂಧಿತ ಸುದ್ದಿ