ಕರ್ನಾಟಕ ಹೈಕೋರ್ಟ್ ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಅಲೋಕ್ ಆರಾಧೆ ಅವರು ನೇಮಕಗೊಂಡಿದ್ದಾರೆ.
ಜುಲೈ 2 ರಂದು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ಅವರು ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿಅಲೋಕ್ ಆರಾಧೆ ಅವರನ್ನು ಗುರುವಾರ ನೇಮಕಗೊಳಿಸಲಾಗಿದೆ ಎಂದು ಕಾನೂನು ಸಚಿವ ಕಿರಣ್ ರಿಜಿಜು ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.
ನ್ಯಾಯಮೂರ್ತಿ ಆರಾಧೆ ಅವರು ಕರ್ನಾಟಕ ಹೈಕೋರ್ಟ್ ನ ಹಿರಿಯ ನ್ಯಾಯಾಧೀಶರಾಗಿದ್ದು, ಜುಲೈ 3ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.
PublicNext
30/06/2022 03:04 pm