ಖುಂಟಿ: ಜಾರ್ಖಂಡ್ ನ ಖುಂಟಿ ಜಿಲ್ಲೆಯಲ್ಲಿ ಟ್ರೈನಿ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 2019 ರ ಬ್ಯಾಚ್ ನ ಐಎಎಸ್ ಅಧಿಕಾರಿಯೊಬ್ಬರನ್ನು ಬಂಧಿಸಲಾಗಿದೆ.ಪ್ರಸ್ತುತ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಆಗಿ ನೇಮಕಗೊಂಡಿರುವ ಅಹ್ಮದ್ ವಿರುದ್ಧ ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 ಎ ಮತ್ತು 509 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಸಂತ್ರಸ್ತ ವಿದ್ಯಾರ್ಥಿನಿ ಸೇರಿದಂತೆ ಹೊರರಾಜ್ಯದ ಎಂಟು ಎಂಜಿನಿಯರಿಂಗ್ ವಿದ್ಯಾರ್ಥಿಗಳು ತರಬೇತಿಗಾಗಿ ಖುಂಟಿಯಲ್ಲಿದ್ದರು ಎಂದು ಪೊಲೀಸ್ ವರಿಷ್ಠಾಧಿಕಾರಿ ಅಮನ್ ಕುಮಾರ್ ತಿಳಿಸಿದ್ದಾರೆ.ಕಳೆದ ಶನಿವಾರ ಡೆಪ್ಯುಟಿ ಡೆವಲಪ್ ಮೆಂಟ್ ಕಮಿಷನರ್ ಅವರ ನಿವಾಸದಲ್ಲಿ ಆಯೋಜಿಸಿದ್ದ ಔತಣಕೂಟದಲ್ಲಿ ಈ ಘಟನೆ ನಡೆದಿದೆ. ಪಾರ್ಟಿಯಲ್ಲಿ, ಐಎಎಸ್ ಅಧಿಕಾರಿ, ಒಬ್ಬಂಟಿಯಾಗಿದ್ದ ವಿದ್ಯಾರ್ಥಿನಿಯ ಬಳಿಗೆ ತೆರಳಿ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಅಧಿಕಾರಿ ಮತ್ತು ಪಾರ್ಟಿಯಲ್ಲಿ ಭಾಗವಹಿಸಿದ್ದ ಕೆಲವು ಅತಿಥಿಗಳನ್ನು ವಿಚಾರಣೆಗೆ ಒಳಪಡಿಸಿದ ನಂತರ ಮೇಲ್ನೋಟಕ್ಕೆ ಆರೋಪ ನಿಜವೆಂದು ಕಂಡುಬಂದಿದೆ. ಸದ್ಯ ವಿದ್ಯಾರ್ಥಿಯನ್ನು ವೈದ್ಯಕೀಯ ತಪಾಸಣೆಗೆ ಕಳುಹಿಸಲಾಗಿದೆ ಎಂದ ಅಮನ್ ಕುಮಾರ್ ಹೇಳಿದ್ದಾರೆ.
PublicNext
06/07/2022 04:21 pm