ಬೆಂಗಳೂರು: ಹೈಕೋರ್ಟ್ ಸರ್ವಿಸ್ ರೆಕಾರ್ಡ್ ಕೇಳಿದೆ. ಅದನ್ನ ರದ್ದು ಪಡಿಸಬೇಕು. ತಮ್ಮ ವಿರುದ್ಧ ಟೀಕೆ ಮಾಡದಂತೆ ನಿರ್ಬಂದ ಹೇರಬೇಕು. ನ್ಯಾಯಮೂರ್ತಿ ಸಂದೇಶ್ ಅವರ ಮೌಕಿಕ ಅಭಿಪ್ರಾಯ ತೆಗೆಯುವಂತೆ ACBಯ ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ಮನವಿ ಮಾಡಿದ್ದಾರೆ.
ಸೀಮಂತ್ ಕುಮಾರ್ ಸಿಂಗ್ ಅವರ ವಿರುದ್ಧ ನ್ಯಾಯಮೂರ್ತಿ ಹೆಚ್.ಪಿ.ಸಂದೇಶ್ ಟೀಕೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿಯೇ ಟೀಕೆಗೆ ನಿರ್ಬಂದ ಕೋರಿಯೇ ಸೀಮಂತ್ ಕುಮಾರ್ ಸಿಂಗ್ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಜಿಲ್ಲಾಧಿಕಾರಿ ಜೆ.ಮಂಜುನಾಥ್ ಲಂಚಕ್ಕೆ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ವಿಚಾರಣೆ ಮುಂದುವರೆದಿದೆ.ಈ ವೇಳೆನೆ ನ್ಯಾಯಮೂರ್ತಿ ಹೆಚ್.ಪಿ.ಸಂದೇಶ್, ಎಸಿಬಿ ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ವಿರುದ್ಧ ಖಾರವಾಗಿಯೇ ಟೀಕಾ ಪ್ರಹಾರ ಮಾಡಿದ್ದಾರೆ.
PublicNext
07/07/2022 06:00 pm