ಬೆಂಗಳೂರು: ಸುಪ್ರೀಂಕೋರ್ಟ್ ನಲ್ಲಿ ಗುರುವಾರ ಕರ್ನಾಟಕಕ್ಕೆ ಸಂಬಂಧಿಸಿದ ಮಹತ್ವದ ಪ್ರಕರಣ ವಿಚಾರಣೆಗೆ ಬರಲಿವೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ನಲ್ಲಿ ವಿಚಾರಣೆ ನಡೆಯಲಿದ್ದು ವಾದಗಳನ್ನು ಮಂಡಿಸಲು ವಕೀಲರು ಸಿದ್ಧತೆ ನಡೆಸಿದ್ದಾರೆ.
ಬಿಬಿಎಂಪಿ ಚುನಾವಣೆ ನಡೆಸುವ ಸಂಬಂಧ ಎಂಟು ವಾರಗಳ ಗಡುವು ಅಂತ್ಯವಾದ ಹಿನ್ನಲೆಯಲ್ಲಿ ನ್ಯಾಯಮೂರ್ತಿ ಎ.ಎಂ.ಕಾನ್ವಿಲ್ಕರ್ ನೇತೃತ್ವದ ಪೀಠ ವಿಚಾರಣೆ ನಡೆಸಲಿದೆ. ಈ ವೇಳೆ ಕರ್ನಾಟಕ ಸರ್ಕಾರವು ಚುನಾವಣೆ ನಡೆಸಲು ಮತ್ತಷ್ಟು ಕಾಲಾವಕಾಶ ಕೋರುವ ಸಾಧ್ಯತೆಯಿದೆ. ಬಿಬಿಎಂಪಿ ವಾರ್ಡ್‌ಗಳ ಪುನರ್ ವಿಂಗಡನೆಯಾದರೂ ಮೀಸಲಾತಿ ನಿಗದಿಪಡಿಸಿ ಈವರೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿಲ್ಲ. ಹೀಗಾಗಿ ಮೀಸಲಾತಿ ಅಂತಿಮಗೊಳಿಸಲು ಕನಿಷ್ಠ ನಾಲ್ಕು ವಾರಗಳ ಸಮಯ ಕೇಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ರಾಜ್ಯ ಸರ್ಕಾರದ ವಾದವನ್ನು ವಿರೋಧಿಸಿ, ಶೀಘ್ರ ಚುನಾವಣೆಗೆ ಸೂಚನೆ ನೀಡಬೇಕು ಎಂದು ಕೋರಲು ಅರ್ಜಿದಾರರಾದ ಶಿವರಾಜು ಮತ್ತು ವಾಜಿದ್ ತಯಾರಿ ಮಾಡಿಕೊಂಡಿದ್ದಾರೆ.
PublicNext
28/07/2022 01:16 pm