ನವದೆಹಲಿ: ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ತುರ್ತು ವಿಚಾರಣೆ ಮನವಿಯನ್ನು ಸುಪ್ರೀಂಕೋರ್ಟ್ ನಲ್ಲಿ ಮಂಗಳವಾರ ಉಲ್ಲೇಖಿಸಲಾಗಿದೆ.ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಗಾಗಿ ಪ್ರತ್ಯೇಕ ನ್ಯಾಯಪೀಠ ರಚಿಸುವುದಾಗಿ ಸುಪ್ರೀಂಕೋರ್ಟ್ ಮಂಗಳವಾರ ಹೇಳಿದೆ.
ಜತೆಗೆ, ಹಿಜಾಬ್ ಗೆ ಹೇರಿರುವ ನಿಷೇಧವನ್ನು ತೆರವುಗೊಳಿಸಬೇಕು ಎಂಬ ಮನವಿಯನ್ನು ಸಿಜೆಐ ಎನ್.ವಿ.ರಮಣ ನೇತೃತ್ವದ ಪೀಠ ತಿರಸ್ಕರಿಸಿದೆ.
ಹೈಕೋರ್ಟ್ ಆದೇಶ ಪ್ರಶ್ನಿಸಿ ಮಾರ್ಚ್ ನಲ್ಲೇ ಅರ್ಜಿಗಳು ಸಲ್ಲಿಕೆಯಾಗಿದ್ದರೂ ಇನ್ನೂ ಅವುಗಳು ಲಿಸ್ಟಿಂಗ್ ಆಗಿಲ್ಲ ಎಂದು ಅರ್ಜಿದಾರರ ಪರ ವಕೀಲರು ಅರಿಕೆ ಮಾಡಿಕೊಂಡರು. ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, “ನ್ಯಾಯಮೂರ್ತಿಯೊಬ್ಬರು ಅನಾರೋಗ್ಯಕ್ಕೀಡಾಗಿರುವ ಕಾರಣ ವಿಳಂಬವಾಗುತ್ತಿದೆ. ಆದಷ್ಟು ಬೇಗ ಹೊಸ ಪೀಠವನ್ನು ರಚಿಸುತ್ತೇವೆ’ ಎಂದಿದೆ.
PublicNext
02/08/2022 11:05 pm