ದೇಶದ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಉದಯ್ ಉಮೇಶ್ ಲಲಿತ್ ಅವರನ್ನು ನೇಮಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಕಳೆದ ವಾರ ಹಾಲಿ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರು ತಮ್ಮ ಉತ್ತರಾಧಿಕಾರಿಯನ್ನಾಗಿ ನ್ಯಾಯಮೂರ್ತಿ ಲಲಿತ್ ಅವರ ಹೆಸರನ್ನು ಶಿಫಾರಸ್ಸು ಮಾಡಿದ್ದರು.ಹಾಲಿ ಸಿಜೆಐ ರಮಣ ಆ.26ಕ್ಕೆ ನಿವೃತ್ತಿಯಾಗಲಿದ್ದಾರೆ.
ಭಾರತದ ಸಂವಿಧಾನದ 124 ನೇ ವಿಧಿಯ ಷರತ್ತು (2) ಮೂಲಕ ನೀಡಲಾದ ಅಧಿಕಾರವನ್ನು ಚಲಾಯಿಸಿ, ರಾಷ್ಟ್ರಪತಿಗಳು ಸುಪ್ರೀಂಕೋರ್ಟ್ ನ ನ್ಯಾಯಾಧೀಶರಾದ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರನ್ನು ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಿದ್ದಾರೆ. ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರು 27 ಆಗಸ್ಟ್ 2022 ರಂದು ಭಾರತದ 49 ನೇ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
PublicNext
10/08/2022 07:23 pm