ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

VIDEO: ಕಸದ ಗಾಡಿಯಲ್ಲಿ ರಾಷ್ಟ್ರಧ್ವಜ ವಿತರಣೆ.!

ಲಕ್ನೋ: ರಾಷ್ಟ್ರಧ್ವಜವನ್ನು ಕಸದ ಗಾಡಿಯಲ್ಲಿಟ್ಟು ವಿತರಣೆ ಮಾಡಿದ ಘಟನೆ ಉತ್ತರ ಪ್ರದೇಶ ಅಯೋಧ್ಯೆಯಲ್ಲಿ ನಡೆದಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆಯ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.

ಅಯೋಧ್ಯೆಯಲ್ಲಿ ಆಜಾದಿ ಕಾ ಅಮೃತ ಮಹೋತ್ಸವ ಹಾಗೂ 'ಹರ್ ಘರ್ ತಿರಂಗಾ' ಅಡಿಯಲ್ಲಿ ಮನೆ ಮನೆಯಲ್ಲೂ ಧ್ವಜವೂ ಹಾರಾಡುತ್ತಿವೆ. ಈ ಹಿನ್ನೆಲೆಯಲ್ಲಿ ಉತ್ತರಪ್ರದೇಶದ ಅಯೋಧ್ಯೆಯಲ್ಲಿ ತಿರಂಗಾ ಯಾತ್ರೆ ಮೂಲಕ ಸಾಧು, ಸಂತರ ನೇತೃತ್ವದಲ್ಲಿ ಧ್ವಜ ವಿತರಣೆ ನಡೆದಿತ್ತು. ಅಯೋಧ್ಯೆ ಮುನ್ಸಿಪಲ್ ಕಾರ್ಪೋರೇಷನ್‍ಗೆ ಸೇರಿದ ವಾಹನದಲ್ಲಿ ಧ್ವಜ ವಿತರಣೆ ಮಾಡಲಾಗಿದೆ ಎನ್ನಲಾಗಿದೆ.

ಈ ವಿಡಿಯೋವನ್ನು ಟ್ವೀಟ್ ಮಾಡಿರುವ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, 'ಅಯೋಧ್ಯೆ ಮುನ್ಸಿಪಲ್ ಕಾರ್ಪೊರೇಷನ್ ನೇತೃತ್ವದಲ್ಲಿ ರಾಷ್ಟ್ರಧ್ವಜವನ್ನು ಕಸದ ವಾಹನದಲ್ಲಿ ಸಾಗಿಸುವ ಮೂಲಕ ರಾಷ್ಟ್ರಧ್ವಜವನ್ನು ಅವಮಾನಿಸಲಾಗಿದೆ. ಈ ರೀತಿ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿರುವುದು ಖಂಡನೀಯ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Edited By : Vijay Kumar
PublicNext

PublicNext

15/08/2022 08:14 am

Cinque Terre

67.88 K

Cinque Terre

6

ಸಂಬಂಧಿತ ಸುದ್ದಿ